ಹೂವಿನಹಡಗಲಿ: ತಾಲೂಕಿನ ಬ್ಯಾಲಹುಣ್ಸಿ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ರೈತರು ಪರದಾಡುವಂತಾಗಿದೆ. 60ಕ್ಕೂ ಹೆಚ್ಚು ಆಕಳು, ದನ ಕರುಗಳ ಮೈ ಮೇಲೆ ಗಂಟುಗಳು ಕಾಣಿಸಿಕೊಂಡಿದ್ದು, ಒಡೆದು ರಕ್ತ ಸೋರುತ್ತಿದೆ.
ಈ ಕುರಿತು ಮಕರಬ್ಬಿ ಪಶು ವೈದ್ಯರಿಗೆ ತಿಳಿಸಿದ್ದರೂ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿಲ್ಲ. ಕೂಡಲೇ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.