ದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಪ್ರವರ್ಗ-3ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ(ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, (ಸಿ)ಆರ್ಯ, ಆರ್ಯರು, (ಡಿ)ಕೊಂಕಣ ಮರಾಠ, (ಇ)ಕ್ಷತ್ರಿಯ…

Ganga welfare project

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಪ್ರವರ್ಗ-3ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ(ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, (ಸಿ)ಆರ್ಯ, ಆರ್ಯರು, (ಡಿ)ಕೊಂಕಣ ಮರಾಠ, (ಇ)ಕ್ಷತ್ರಿಯ ಮರಾತ/ಕ್ಷತ್ರಿಯ ಮರಾಠ, (ಎಫ್) ಕುಳವಾಡಿ ಜನರ ಶೈಕ್ಷಣಿಕ ಹಾಗೂ ಅರ್ಥಿಕಾಭಿವೃದ್ಧಿಗಾಗಿ 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜೀಜಾವು-ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ) ಯಡಿ ವೈಯಕ್ತಿಕ ಕೊಳವೆಬಾವಿ ಯೋಜನೆಗಾಗಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‍ಸೆಟ್, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲು ಘಟಕ ವೆಚ್ಚ ರೂ.2 ಲಕ್ಷಗಳು ಹಾಗೂ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.3.50 ಲಕ್ಷಗಳನ್ನು ನೀಡಲಾಗುವುದು. ಈ ವೆಚ್ಚದಲ್ಲಿ, ಪ್ರತಿ ಕೊಳವೆ ಬಾವಿಗೆ ವಿದ್ಯುದ್ದೀಕರಣಕ್ಕಾಗಿ ರೂ.50,000/-ಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು. ಹಾಗು ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿಗಳ ಮೂಲಕ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಯೋಜನೆಯಡಿ ಪ್ರಯೋಜನ ಪಡೆಯಬಯಸುವವರು, ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಮತ್ತು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕಾಗಿದ್ದು, ವಾರ್ಷಿಕ ವರಮಾನ ರೂ.98,000/-ಗಳ ಮಿತಿಯಲ್ಲಿರಬೇಕು. ಫಲಾನುಭವಿಗಳು 18-60 ವರ್ಷಗಳ ವಯಸ್ಸಿನ ಮಿತಿಯಲ್ಲಿರಬೇಕು.

Vijayaprabha Mobile App free

2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಯಡಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ಸರ್ಕಾರಿ ಕಾಲೇಜು/ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ/ತಾಂತ್ರಿಕ/ಉನ್ನತ ವ್ಯಾಸಂಗದ ಕೋರ್ಸ್‍ಗಳಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾದ 18 ರಿಂದ 35 ವರ್ಷ ವಯೋಮಿತಿಯ ಹಾಗೂ ವಾರ್ಷಿಕ ವರಮಾನವು ಎಲ್ಲಾ ಮೂಲಗಳಿಂದ ರೂ3.50 ಲಕ್ಷಗಳಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆಯಡಿ 2022-23ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ,ಸೈನ್ಸ್ ಮತ್ತು ಟೆಕ್ನಾಲಜಿ, ಮ್ಯಾನೇಜ್‍ಮೆಂಟ್ ಮತ್ತು ಕಾಮರ್ಸ್, ಅಗ್ರಿಕಲ್ಚರ್ ಮತ್ತು ಅಲೈಡ್ ಸೈನ್ಸಸ್ / ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ ಮತ್ತು ಸೋಷಿಯಲ್ ಸೈನ್ಸಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಕೋರ್ಸ್‍ಗಳಲ್ಲಿ ಉನ್ನತ ವ್ಯಾಸಂಗ ಮಾಡುವ ಹಾಗೂ 18 ರಿಂದ 35 ವರ್ಷ ವಯೋಮಿತಿಯ ಮತ್ತು ವಾರ್ಷಿಕ ವರಮಾನವು ಎಲ್ಲಾ ಮೂಲಗಳಿಂದ ರೂ.8 ಲಕ್ಷಗಳಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯಡಿ ವಾರ್ಷಿಕ ಗರಿಷ್ಠ ರೂ.7.50 ಲಕ್ಷಗಳಂತೆ ಎರಡು ವರ್ಷಗಳ ಅವಧಿಗೆ ಗರಿಷ್ಠ ರೂ.15 ಲಕ್ಷಗಳ ಸಾಲವನ್ನು ಮಂಜೂರು ಮಾಡಲಾಗುವುದು. ಮೇಲಿನ ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್‍ಕಾರ್ಡ್‍ನಲ್ಲಿರುವಂತೆಯೇ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕ ಹಾಗೂ ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಹೊಂದಾಣಿಕೆಯಾಗಬೇಕು.ಇನ್ನು, ನಿಗಮದಲ್ಲಿ ಒಂದು ಬಾರಿ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kmcdc.karnataka.gov.in ನಲ್ಲಿ ಸಂಪರ್ಕಿಸಿ ಅಥವಾ ನಿಗಮದ ದೂರವಾಣಿ 08192-230934 ಗೆ ಕಚೇರಿಯ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.