ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, 2500 ಹುದ್ದೆಗಳಿಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಹೌದು, ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್, ರಾಜ್ಯದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ಸಾಕಷ್ಟಿದ್ದು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಪ್ರೌಢಶಾಲೆಗಳಲ್ಲಿ ಸಹ ಶಿಕ್ಷಕರು– 2,200 ಹುದ್ದೆ, ದೈಹಿಕ ಶಿಕ್ಷಣ ಶಿಕ್ಷಕರು– 200 ಹುದ್ದೆ, ವಿಶೇಷ ಶಿಕ್ಷಕರು– 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಸಹ ಶಿಕ್ಷಕರು – 2,200 ಹುದ್ದೆಗಳು.
ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು.
ವಿಶೇಷ ಶಿಕ್ಷಕರು – 100 ಹುದ್ದೆಗಳು.@BSBommai @BJP4Karnataka
— B.C Nagesh (@BCNagesh_bjp) September 12, 2022