ದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 6 ರಿಂದ 18 ವರ್ಷವಯೋಮಾನದೊಳಗಿರಬೇಕು. ಮಕ್ಕಳು…

Hoysala and Keladi Chennamma Award

ದಾವಣಗೆರೆ ಸೆ.13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 6 ರಿಂದ 18 ವರ್ಷವಯೋಮಾನದೊಳಗಿರಬೇಕು. ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇನ್ನು, ಈ ಅರ್ಜಿಯನ್ನು ಸೆ.31 ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಬಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಕಚೇರಿಯಲ್ಲಿ ಪಡೆದು ಅಕ್ಟೋಬರ್ 11 ರೊಳಗಾಗಿ ಸಲ್ಲಿಸಬೇಕು.

Vijayaprabha Mobile App free

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08192-264056 ಗೆ ಸಂಪರ್ಕಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.