ಬೆಂಗಳೂರು: ರಾಜ್ಯದಲ್ಲಿ 47 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅದರಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಹೌದು, ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಸಿ.ನಾಗೇಶ್, ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 27 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು,1:2 ಅಭ್ಯರ್ಥಿಗಳ ಪರಿಶೀಲನೆ 15 ದಿನಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



