ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವೆಡೆ 2 ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ಎರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ ಮೈಸೂರು, ಹಾಸನ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ರಾಮನಗರ, ಕೋಲಾರ ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಲಿದ್ದು, ಅಕ್ಟೋಬರ್ 8 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಈ ತಿಂಗಳ 2ನೇ ವಾರದಲ್ಲಿ ರಾಜ್ಯಕ್ಕೆ ಹಿಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.