ನನ್ನ ಬಹುಕಾಲದ ಗೆಳೆಯನನ್ನು ಕಳೆದುಕೊಂಡಿದ್ದೇನೆ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ದೇವೇಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್ ದೇವೇಗೌಡ ಅವರು, “ನನ್ನ ಬಹುಕಾಲದ ಸಹೋದ್ಯೋಗಿ ಮತ್ತು ಸ್ನೇಹಿತ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಮುಲಾಯಂ ಸಿಂಗ್ ಅವರು ಜಾತ್ಯತೀತ ಮತ್ತು ಸಮಾಜವಾದಿ ರಾಜಕೀಯಕ್ಕೆ ಅತ್ಯಂತ ಬದ್ಧರಾಗಿದ್ದರು. ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
I am deeply saddened by the passing away of my longtime colleague and friend Shri #MulayamSinghYadav My condolences to his family and followers. He was deeply committed to the secular and socialist political traditions. Will miss him very much. @samajwadiparty @yadavakhilesh pic.twitter.com/KpcQil8hzP
— H D Devegowda (@H_D_Devegowda) October 10, 2022