ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನವದೆಹಲಿಯ ಪುಸಾ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022 ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್ ಯೋಜನೆಯ 12ನೇ ಕಂತಾಗಿ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂ. ಹಣವನ್ನು ಜಮಾ ಮಾಡಿದರು.
ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಲ್ಲಿ ಯಾವುದೇ ವಂಚನೆಯನ್ನು ತಡೆಯಲು ಸರ್ಕಾರವು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಿದೆ. ಆದ್ರೆ ಒಂದೇ ಒಂದು ತಪ್ಪಿನಿಂದ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯುವಲ್ಲಿ ರೈತರು ವಿಫಲರಾಗಿದ್ದಾರೆ.
ಹೌದು, ಸರ್ಕಾರ ಸ್ಪಷ್ಟಪಡಿಸಿದಂತೆ ರೈತರ ಖಾತೆಗಳಿಗೆ ನಿಗದಿತ ಸಮಯಕ್ಕೆ ಇ-ಕೆವೈಸಿ ಪೂರ್ಣಗೊಳಿಸದ ನಾಲ್ಕು ಕೋಟಿ ರೈತರಿಗೆ ಪಿಎಂ ಕಿಸಾನ್ 12ನೇ ಕಂತಿನ ಹಣವನ್ನು ವರ್ಗಾಯಿಸಲಾಗಿಲ್ಲ ಎಂದು ತಿಳಿಸಿದೆ.