ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ನಿನ್ನೆ ರಾತ್ರಿ (ಜ.11) ಬೆಂಗಳೂರಿನಿಂದ ಯಾದಗಿರಿಗೆ ಹಿಂದಿರುಗುವಾಗ ನಗರದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸ್ವಾಮೀಜಿ ಮೃತಪಟ್ಟಿದ್ದಾರೆ.
ಮುಂದಿನ ತಿಂಗಳು ಸ್ವಾಮೀಜಿಯ 25ನೇ ಪಟ್ಟಾಧಿಕಾರ ಮಹೋತ್ಸವ ನಡೆಯಬೇಕಿತ್ತು. ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಿ ಯಾದಗಿರಿಗೆ ಹಿಂದಿರುಗುವಾಗ ದುರಂತ ಸಂಭವಿಸಿದೆ. ಕುಸಿದುಬಿದ್ದ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅಸುನೀಗಿದ್ದಾರೆ. ದೋರನಹಳ್ಳಿ ಹಿರೇಮಠವು ರಂಭಾಪುರಿ ಪೀಠದ ಶಾಖಾ ಮಠವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.