ಮಣಿಪುರದ ಇಂಫಾಲ್ ಜಿಲ್ಲೆಯಲ್ಲಿ ಖ್ಯಾತ ಬಾಲಿವುಡ್ ನಟ ಸನ್ನಿ ಲಿಯೋನ್ ಫ್ಯಾಶನ್ ಶೋ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಸ್ಥಳದಲ್ಲಿ ಇಂದು ಬೆಳಗ್ಗೆ ಬಾಂಬ್ ಸ್ಫೋಟ ಸಂಭವಿಸಿದ್ದು, ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.
ಹೌದು, ಇಂಫಾಲ್ ಪೂರ್ವದ ಹಪ್ಟಾ ಕಾಂಗ್ಜೆಬುಂಗ್ನಲ್ಲಿ ನಾಳೆ ಸನ್ನಿ ಲಿಯೋನ್ ಫ್ಯಾಷನ್ ಶೋ ಆಯೋಜಿಸಲಾಗಿದ್ದು ಅದಕ್ಕೂ ಮೊದಲೇ ಸ್ಫೋಟ ಆಗಿರುವುದರಿಂದ ದೊಡ್ಡ ದುರಂತ ತಪ್ಪಿದೆ. ಪೊಲೀಸರ ಪ್ರಕಾರ, ಕಾರ್ಯಕ್ರಮದ ವೇದಿಕೆ ಬಳಿಯೇ ಚೈನೀಸ್ ಗ್ರೆನೈಡ್ ರೀತಿ ಸಾಧನ ಸ್ಫೋಟವಾಗಿದ್ದು, ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.