ಗ್ರಾಹಕರಿಗೆ ಮತ್ತೆ ದರ ಏರಿಕೆ ಬಿಸಿ ತಟ್ಟಿದ್ದು, ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರ ಏರಿಕೆ ಬಳಿಕ ಇದೀಗ ನಂದಿನಿ ಜಂಬೂ ಹಾಲಿನ ದರವನ್ನು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೆಚ್ಚಳ ಮಾಡಿದೆ.
ಹೌದು,ಕೆಎಂಎಫ್ ನಂದಿನಿ ಜಂಬೋ ಪ್ಯಾಕೆಟ್ ಹಾಲಿನ ದರವನ್ನು 3 ರೂ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದ್ದು, ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ದರ ಏರಿಕೆ ಹಿನ್ನೆಲೆ ಜಂಬೂ ಪ್ಯಾಕೇಟ್ ಹಾಲಿನ ದರಗಳು ಇಂದಿನಿಂದ 231ರಿಂದ 234 ರೂ ಗೆ ಏರಿಕೆಯಾಗಲಿದೆ ಎಂದು ಕೆಎಂಎಫ್ ಹೇಳಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.