ರಾಜ್ಯ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ಕಾವೇರಿದೆ. ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.
ಹೌದು, ನಟ ಕಿಚ್ಚ ಸುದೀಪ್ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ. ರಮ್ಯಾ ಮೂಲಕ ಸುದೀಪ್ ಗೆ ಕೈ ನಾಯಕರು ಗಾಳ ಹಾಕಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಹರಡುತ್ತಿತ್ತು. ಈ ಕುರಿತು ಕೊನೆಗೂ ನಟ ಸುದೀಪ್ ಮೌನ ಮುರಿದಿದ್ದಾರೆ.
ಇದೀಗ ಸ್ವತಃ ನಟ ಕಿಚ್ಚ ಸುದೀಪ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನನಗೆ ಎರಡೂ ಕಡೆ (ಕಾಂಗ್ರೆಸ್-ಬಿಜೆಪಿ) ಆಪ್ತರಿದ್ದಾರೆ. ಹಾಗಾಗಿ, ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ (ಜನರ ಪಕ್ಷ) ಮುಖ್ಯ ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ಇತಿಶ್ರೀ ಹಾಡಿದ್ದಾರೆ.