ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ 2ನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ. ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ.
ಹೌದು, ರಾಜ್ಯದ ರೈತರಿಗೆ ಸಿಎಂ ಭರ್ಜರಿ ಗಿಫ್ಟ್ ನೀಡಿದ್ದು, ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿಗಳ ಸಾಲ ಸೌಲಭ್ಯವನ್ನು ಘೋಷಿಸಿದ್ದಾರೆ. ಈ ಹಿಂದೆ ಈ ಮೊತ್ತ 3 ಲಕ್ಷ ರೂಪಾಯಿಗಳಿತ್ತು. ಇದೇ 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಇದು ನೆರವಾಗಲಿದೆ ಎಂದು ಘೋಷಿಸಿದರು. ವಸತಿ ರಹಿತ ಮೀನುಗಾರರಿಗೆ ವಿಶೇಷ ಯೋಜನೆಯಡಿ ಮನೆ ಸೌಲಭ್ಯವನ್ನು ಕಲ್ಪಿಸುವ ಘೋಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.