ಕಳುವಾದ ಮತ್ತು ಕಾಣೆಯಾದ Mobile Phone ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನ

ಇತ್ತೀಚಿನ ದಿನಗಳಲ್ಲಿ ಕಳುವಾದ ಕಾಣೆಯಾದ ಸುಲಿಗೆಯಾದ Mobile Phone ಗಳು ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ Mobile Phone ಗಳ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಕಳುವಾದ ಕಾಣೆಯಾದ ಸುಲಿಗೆಯಾದ Mobile…

mobile phone vijayaprabha news

ಇತ್ತೀಚಿನ ದಿನಗಳಲ್ಲಿ ಕಳುವಾದ ಕಾಣೆಯಾದ ಸುಲಿಗೆಯಾದ Mobile Phone ಗಳು ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ Mobile Phone ಗಳ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಕಳುವಾದ ಕಾಣೆಯಾದ ಸುಲಿಗೆಯಾದ Mobile Phone ಗಳನ್ನು ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿರುತ್ತದೆ ಹಾಗೂ ಪೊಲೀಸ್ ಇಲಾಖೆಯಿಂದ ಕೂಡಾ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ.

ಈ ಕೆಳಕಂಡ ವಿಧಾನಗಳನ್ನು ಅನುಸರಿಸುವುದರ ಮೂಲಕ ಕಳುವಾದ/ಕಾಣೆಯಾದ ಸುಲಿಗೆಯಾದ Mobile Phoneಗಳನ್ನು ಬ್ಲಾಕ್ ಮಾಡಬಹುದಾಗಿದೆ

1. ನಿಮ್ಮ ಮೊಬೈಲ್ ಫೋನ್ ಕಳವು ಕಾಣೆಯಾದರೆ ಮತ್ತು ಸುಲಿಗೆಯಾದರೆ ತಾವು ತಕ್ಷಣವೇ KSP E-Lost ಅಪ್ಲಿಕೇಶನ್ ನಲ್ಲಿ ದೂರನ್ನು ಸಲ್ಲಿಸಿ Digital E-Acknowledgement ಪಡೆದುಕೊಳ್ಳಬೇಕು. ಮತ್ತು ಹತ್ತಿರದ ಪೊಲೀಸ್‌ ಠಾಣೆಗೆ ತೆರಳಿ ದೂರನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಂಡು, ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟು ಕೊಂಡಿರಬೇಕು.

Vijayaprabha Mobile App free

2. ನೀವು ಕಳೆದುಕೊಂಡಿರುವ ಸಿಮ್ ಕಾರ್ಡ್ ಅನ್ನು ಸಂಬಂಧಪಟ್ಟ ಸರ್ವಿಸ್ ಪ್ರೊವೈಡರ್ ನಿಂದ ಮತ್ತೆ ಪಡೆದುಕೊಂಡು OTP ಪಡೆಯಲು ಸದರಿ ಸಿಮ್ ಕಾರ್ಡನ್ನು ಚಾಲನೆಯಲ್ಲಿ ಇಟ್ಟುಕೊಳ್ಳಬೇಕು. ಹೀಗೆ ಮಾಡುವುದರಿಂದ CEIR PORTAL ನಲ್ಲಿ OTP ಪಡೆಯಲು ಇದು ಅನುಕೂಲವಾಗುತ್ತದೆ.

3. http://www.ceir.gov.in ವೆಬ್ ಸೈಟ್‌ಗೆ ಹೋಗಿ ತಮ್ಮ ಕಳುವಾದ ಕಾಣೆಯಾದ ಮತ್ತು ಸುಲಿಗೆಯಾದ ಮೊಬೈಲ್ ಫೋನ್‌ಗಳ ಮಾಹಿತಿಯನ್ನು ನಮೂದಿಸಿ, ನಂತರ ಬರುವ Request ID ಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ ಮೊಬೈಲ್‌ ಫೋನ್ ಬ್ಲಾಕ್ ಆಗುತ್ತದೆ. ಇದರಿಂದ ಯಾರೂ ಕೂಡಾ ಆ ಮೊಬೈಲ್ ಅನ್ನು ದುರ್ಬಳಕೆ ಮಾಡಲು ಸಾದ್ಯವಿರುವುದಿಲ್ಲ.

4. ಒಂದು ವೇಳೆ ಕಳುವಾದ ಕಾಣೆಯಾದ ಮೊಬೈಲ್ ಫೋನ್ ಪತ್ತೆಯಾದರೆ ಈಗಾಗಲೇ ತಿಳಿಸಿರುವ CEIR PORTAL ನಲ್ಲಿ ಲಾಗಿನ್ ಆಗಿ Request ID ಯನ್ನು ನಮೂದಿಸಿ Unblock ಮಾಡಿ ಉಪಯೋಗಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.