ರಾಜಕೀಯ ನಿವೃತ್ತಿ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ರಾಜ್ಯ ರಾಜಕಾರಣದಲ್ಲಿ ಅತ್ಯಂತ ಹಿರಿಯರಾಗಿರುವ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ರಾಜಕೀಯದಿಂದ ಸದ್ಯ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹೌದು ಚಿತ್ರದುರ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು, ‘ಮಾಜಿ ಸಿಎಂ ಬಿಎಸ್‌ವೈ…

Shamanur Shivshankarappa

ರಾಜ್ಯ ರಾಜಕಾರಣದಲ್ಲಿ ಅತ್ಯಂತ ಹಿರಿಯರಾಗಿರುವ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ರಾಜಕೀಯದಿಂದ ಸದ್ಯ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಹೌದು ಚಿತ್ರದುರ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು, ‘ಮಾಜಿ ಸಿಎಂ ಬಿಎಸ್‌ವೈ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. ಆದರೆ ನನಗೆ ಅಂತಹ ಚಿಂತನೆ ಇಲ್ಲ. ಈ ಬಾರಿಯೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದು, ಅದರಲ್ಲಿ ಯಾವುದೇ ಅನುಮಾನವಿಲ್ಲ. 1994ರಿಂದ MLA ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಇದು ನನಗೆ 6ನೇ ಚುನಾವಣೆಯಾಗಿದೆ’ ಎಂದು ಹೇಳಿದ್ದಾರೆ.

ನಮಗೆ 70 ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಿ: ಶಾಮನೂರು

Vijayaprabha Mobile App free

ರಾಜ್ಯದ 70 ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಡಿಕೆಶಿಗೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವಿ ಸಲ್ಲಿಸಿದ್ದಾರೆ.

ಹೌದು, ಲಿಂಗಾಯತ-ವೀರಶೈವ ಸಮುದಾಯ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಪಕ್ಷ ಅಧಿಕಾರಕ್ಕೆ ಬರಲು ಈ ಸಮುದಾಯದ ಸಹಾಯ ಅವಶ್ಯಕ. ಕಳೆದ ಬಾರಿ 40ಕ್ಕೂ ಹೆಚ್ಚು ಈ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. 16 ಜನ ಗೆದ್ದಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.