ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಕರುನಾಡಿನಲ್ಲಿಂದು ಮತ್ತೆ ಮೋದಿ ಮೇನಿಯಾ ನಡೆಯಲಿದೆ.
ಹೌದು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಅದ್ಧೂರಿಯಾಗಿ ಲೋಕಾರ್ಪಣೆ ಮಾಡಲಿದ್ದಾರೆ.
ಆ ನಂತರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮದ್ದೂರು ತಾಲೂಕಿನ ಗಜ್ಜಲಗೆರೆ ಬಳಿ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಮೋದಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಡಳಿತ ಭರದ ಸಿದ್ಧತೆ ನಡೆಸಿದೆ. ಗಜ್ಜಲೆಗೆರೆ ಬಳಿ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ರೆಡಿಯಾಗ್ತಿದ್ದು ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಸುಮಾರು 30 ಎಕರೆ ವಿಸ್ತೀರ್ಣದಲ್ಲಿ ಜರ್ಮನ್ ಟೆಂಟ್ ಹಾಕಲಾಗಿದ್ದು, 1 ಲಕ್ಷಕ್ಕೂ ಅಧಿಕ ಮಂದಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.
ಚುನಾವಣೆಯ ದೃಷ್ಟಿಯಿಂದ ಇಂದಿನ ಮೋದಿ ಭೇಟಿ ಭಾರೀ ಕುತೂಹಲ ಮೂಡಿಸಿದ್ದು, ಸದ್ಯ ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಕೇಂದ್ರ ನಾಯಕರು ಪಣ ತೊಟ್ಟಿದ್ದಾರೆ.




