ಬಹುಭಾಷಾ ಖ್ಯಾತ ನಟಿ ತಮನ್ನಾ ಭಾಟಿಯ ಇತ್ತೀಚೆಗೆ ಸಿನಿಮಾ ವಿಚಾರಕ್ಕಿಂತ ಬೇರೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ.
ಹೌದು, ನಟಿ ತಮನ್ನಾ ಭಾಟಿಯಾ-ನಟ ವಿಜಯ್ ವರ್ಮಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಡಿದೆ. ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಇಬ್ಬರೂ ಪ್ರೀತಿ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ.
ಆದರೆ, ಈ ಬಗ್ಗೆ ನಟಿ ತಮನ್ನಾ ಮೌನ ಮುರಿದಿದ್ದು, ಈ ವದಂತಿ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿದ ನಟಿ ತಮನ್ನಾ ಡೇಟಿಂಗ್ ವಿಚಾರವನ್ನು ತಳ್ಳಿ ಹಾಕಿದ್ದಾರೆ. ʻನಾವಿಬ್ಬರು ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂತಹ ವದಂತಿ ಹರಡುತ್ತಿರುತ್ತದೆʼ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ’ ಎಂದು ಹೇಳಿದ್ದಾರೆ.