ಜನ ಸಾಮಾನ್ಯರಿಗೆ ಬಂಪರ್ ಗಿಫ್ಟ್; 300ರೂ LPG ಸಬ್ಸಿಡಿ ಘೋಷಣೆ

ಗ್ಯಾಸ್ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ಪುದುಚೇರಿ(ಕೇಂದ್ರಾಡಳಿತ ಪ್ರದೇಶ) ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ರೂ.300 ವರೆಗೆ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಪುದುಚೇರಿ ಸಿಎಂ ಏನ್…

LPG cylinder

ಗ್ಯಾಸ್ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ಪುದುಚೇರಿ(ಕೇಂದ್ರಾಡಳಿತ ಪ್ರದೇಶ) ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ರೂ.300 ವರೆಗೆ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ.

ಪುದುಚೇರಿ ಸಿಎಂ ಏನ್ ರಂಗಸ್ವಾಮಿ ಅವರು 2023-24ನೇ ಹಣಕಾಸು ವರ್ಷಕ್ಕೆ ಮಂಡಿಸಿದ ಬಜೆಟ್‌ನಲ್ಲಿ ಇದನ್ನು ಬಹಿರಂಗಪಡಿಸಿದ್ದಾರೆ. ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ಮೇಲೆ ರೂ.300 ಸಬ್ಸಿಡಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಎಲ್ಲ ಕುಟುಂಬಗಳಿಗೆ ಪ್ರತಿ ತಿಂಗಳು ₹300 ಎಲ್‌ಪಿಜಿ ಸಬ್ಸಿಡಿ ಘೋಷಣೆ ಮಾಡಿದ್ದು, ಇದಕ್ಕಾಗಿ ₹126 ಕೋಟಿ ಮೀಸಲಿರಿಸಿದೆ. ₹11,600 ಕೋಟಿ ತೆರಿಗೆ ಮುಕ್ತ ಬಜೆಟ್ ಮಂಡಿಸಿದ ರಂಗಸಾಮಿ, ಯುವಕರಿಗೆ ಉದ್ಯೋಗ ಕಲ್ಪಿಸಲು ₹100 ಕೋಟಿ ಹೂಡಿಕೆಯೊಂದಿಗೆ ಕೈಗಾರಿಕೆ ಆರಂಭಿಸುವ ಉದ್ಯಮಗಳಿಗೆ ಶೇ 1ರಷ್ಟು ಸಹಾಯಧನ ನೀಡಲು ನಿರ್ಧರಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.