ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೆಸ್ಟ್ ಸರಣಿಯಲ್ಲಿ 2-0ಯಿಂದ ಹಿಂದಿದ್ದ ಬಳಿಕ ಅಮೋಘ ಕಂ ಬ್ಯಾಕ್ ಮಾಡಿದ್ದ ಆಸೀಸ್ (2-1) ಈಗ ಏಕದಿನ ಪಂದ್ಯದಲ್ಲೂ ಅಮೋಘ ಪ್ರದರ್ಶನ ನೀಡುವ ಪ್ಲಾನ್ ಮಾಡಿದೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯಾ ತಂಡ ಮುನ್ನಡೆಸಲಿದ್ದಾರೆ. ಆಸೀಸ್‌ಗೆ ಸ್ಟೀವ್ ಸ್ಮಿತ್ ನಾಯಕನಾಗಿದ್ದಾರೆ. ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ.
ಶುಭಮನ್ ಗಿಲ್-ಕಿಶನ್ ಓಪನರ್ಸ್: ಪಾಂಡ್ಯಾ
ಮುಂಬೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಇಂದು ನಡೆಯಲಿದ್ದು, ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ಹೀಗಾಗಿ, ದ್ವಿಶತಕ ವೀರರಾದ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಭಾರತದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಕೌಟುಂಬಿಕ ಕಾರಣದಿಂದ ರೋಹಿತ್ ಮೊದಲ ಪಂದ್ಯವನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಕಳೆದ ನ್ಯೂಜಿಲೆಂಡ್ ಸರಣಿಯಲ್ಲಿ ಗಿಲ್ ದ್ವಿಶತಕ ಸಿಡಿಸಿ ಮಿಂಚಿದ್ದರು.
ಇದನ್ನು ಓದಿ: ಆರ್ಸಿಬಿಗೆ ಬಿಗ್ ಶಾಕ್ ನೀಡಿದ ಸ್ಟಾರ್ ಆಲ್ರೌಂಡರ್; IPL 2023 ಟೂರ್ನಿಯಿಂದ ಹೊರಬಿದ್ದ ಆಟಗಾರರು ಇವರೇ ನೋಡಿ
ತಂಡಗಳ ಸಂಭಾವ್ಯ ಪಟ್ಟಿ ಹೀಗಿದೆ
ಭಾರತ ತಂಡ: ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಆಶ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್ , ನಾಥನ್ ಎಲ್ಲಿಸ್
ಇದನ್ನು ಓದಿ: ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ಹಣ, ಈಗಲೇ ಚೆಕ್ ಮಾಡಿ