ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (MGNREGS) ಯಡಿ ನರೇಗಾ ಯೋಜನೆಯನ್ನು 2005ರ ಸೆಪ್ಟೆಂಬರ್ 5ರಂದು ಜಾರಿಗೆ ತರಲಾಯಿತು. ಒಂದು ಕುಟುಂಬದ ವಯಸ್ಕ ಸದಸ್ಯರು ಸ್ವಯಂ ಪ್ರೇರಿತರಾಗಿ ನೋಂದಣಿಯಾದರೆ ಅಂತಹವರಿಗೆ ಆರ್ಥಿಕ ಒಂದು ವರ್ಷದಲ್ಲಿ ನೂರು ದಿನಗಳ ಉದ್ಯೋಗ ನೀಡಲಾಗುತ್ತದೆ. ಇದರಿಂದ ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟಗಳನ್ನು ಎದುರಿಸುವ ಬಡ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ನರೇಗಾ ಯೋಜನೆಯು ಮಹತ್ವದ ಪಾತ್ರ ವಹಿಸಲಿದೆ.
ಇದನ್ನು ಓದಿ: ಗುಡ್ ನ್ಯೂಸ್: ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರ ವೇತನ ಹೆಚ್ಚಳ, ದರಗಳ ಪಟ್ಟಿ ಹೀಗಿದೆ
ನರೇಗಾ ಯೋಜನೆಯಡಿ 2.5 ಲಕ್ಷ ರೂಪಾಯಿ ಸಹಾಯಧನ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದ್ದು, ಸದರಿ ಯೋಜನೆಯಲ್ಲಿ ಸಣ್ಣ, ಅತೀ ಸಣ್ಣ ರೈತರು ಮತ್ತು ಪಶುಪಾಲಕರು ಗರಿಷ್ಟ 2.5 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅವಕಾಶವಿದೆ.
ಈ ಸಹಾಯ ಧನ ಪಡೆದು ಕುರಿ/ಮೇಕೆ ಕೊಟ್ಟಿಗೆ, ಬಚ್ಚಲು ಗುಂಡಿ, ದನದ ಕೊಟ್ಟಿಗೆ, ಕೋಳಿ ಶೇಡ್, ಮೀನು ಕೃಷಿ ಕೊಳ, ಕಂದಕ ಬದು ನಿರ್ಮಾಣ, ಹಂದಿ ಕೊಟ್ಟಿಗೆ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ, ಎರೆಹುಳು ಘಟಕ, ತೆರೆದ ಬಾವಿ, ಕೃಷಿ ಹೊಂಡ, ಪೌಷ್ಟಿಕಾಂಶ ಕೈತೋಟದಲ್ಲಿ ಕೆಲಸ ಮಾಡಿಸಿಕೊಳ್ಳಬಹುದು
ಇದನ್ನು ಓದಿ: PPF Account: ಸರ್ಕಾರದ ಈ ಯೋಜನೆ ಲಕ್ಷಾಧಿಪತಿಗಳನ್ನಾಗಿಸುತ್ತದೆ; ಹೂಡಿಕೆ ಕಡಿಮೆ, ಬಡ್ಡಿಯೊಂದಿಗೆ ಕೋಟಿಗೂ ಹೆಚ್ಚು ಲಾಭ..!
ಜಾಬ್‌ಕಾರ್ಡ್ ಪಡೆಯುವುದು ಹೇಗೆ?
ಇನ್ನು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ( (MGNREGS)) ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಜಾಬ್ ಕಾರ್ಡ್ ಹೊಂದಿರಬೇಕು. ಇದಕ್ಕಾಗಿ ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ನಮೂನೆ 1ನ್ನು ಭರ್ತಿ ಮಾಡಿ, ಕುಟುಂಬದ 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ಸದಸ್ಯರ ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಸೇರಿದನಂತೆ ಇತರೆ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಜಾಬ್‌ಕಾರ್ಡ್ ಪಡೆಯಬಹುದು. ಇಲ್ಲದಿದ್ದರೆ, ಸಾಮಾನ್ಯ ಸೇವಾಕೇಂದ್ರ, ಗ್ರಾಮ ಒನ್ ನಲ್ಲಿ ಕೂಡ ಅರ್ಜಿ ಸಲ್ಲಿಸಬಹುದು
ಇನ್ನು, ಉದ್ಯೋಗ ಚೀಟಿ ಪಡೆಯಲು ಕುಟುಂಬದ ಪ್ರತಿಯೊಬ್ಬ ವಯಸ್ಕ ಸದಸ್ಯರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಅಗತ್ಯವಾಗಿದ್ದು, ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಿರಿ.
ಇದನ್ನು ಓದಿ: ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ