ಭಾರೀ ಮಳೆಗೆ ರಸ್ತೆಗಳು ಜಲಾವೃತ, ವಿಮಾನ ಹಾರಾಟದಲ್ಲಿ ವ್ಯತ್ಯಯ; ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನು ಓದಿ: BIG…

Heavy Rain

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: BIG NEWS: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬಂಧನ, ಏನದು ಪೋರ್ನ್‌ ಸ್ಟಾರ್‌-ಟ್ರಂಪ್‌ ಕೇಸ್‌?

ದಕ್ಷಿಣ ಒಳನಾಡಿನಲ್ಲಿ ಸಂಜೆ ವೇಳೆ ಜೋರು ಮಳೆಯಾಗಲಿದೆ ಎಂದು ಎಚ್ಚರಿಸಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free

ಇದನ್ನು ಓದಿ: SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಹ ಮಳೆಯಾಗಲಿದ್ದು, ಉಷ್ಣಾಂಶ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಯಿಂದ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಭಾರೀ ಮಳೆಗೆ ರಸ್ತೆಗಳು ಜಲಾವೃತ, ವಿಮಾನ ಹಾರಾಟದಲ್ಲಿ ವ್ಯತ್ಯಯ

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಅನೇಕ ಕಡೆ ರಸ್ತೆಗಳು ಜಲಾವೃತವಾಗಿದ್ದು, ವೈಟ್‌ಫೀಲ್ಡ್‌ ಅಂತೂ ಅಕ್ಷರಶಃ ನಲುಗಿ ಹೋಗಿದೆ. ಮಾರತಹಳ್ಳಿ, ದೇವನಹಳ್ಳಿಯಲ್ಲೂ ವರುಣ ಅವಾಂತರ ಸೃಷ್ಟಿಸಿದ್ದಾನೆ.

ಇದನ್ನು ಓದಿ: ಮಹಿಳೆಯರಿಗೆ ಸಂತಸದ ಸುದ್ದಿ: ಅಂಚೆ ಕಚೇರಿಗಳಲ್ಲಿ ಹೊಸ ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ?

ಭಾರೀ ಗಾಳಿ ಮತ್ತು ಕೆಟ್ಟ ವಾತಾವರಣದಿಂದಾಗಿಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ತೊಂದರೆಯಾಗಿದ್ದು, 14 ವಿಮಾನಗಳ ಮಾರ್ಗ ಬದಲಿಸಲಾಗಿದ್ದು, 6 ವಿಮಾನಗಳ ಟೇಕ್‌ಆಫ್‌ ವಿಳಂಬವಾಗಿತ್ತು.

ಇನ್ನು, ನಿನ್ನೆ ಸಂಜೆ 4:05ರಿಂದ 4:51ರ ನಡುವೆ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಿಂದಾಗಿ 14 ವಿಮಾನಗಳನ್ನು ಚೆನ್ನೈ, ಹೈದರಾಬಾದ್ ಮತ್ತು ಕೊಯಮತ್ತೂರ್‌ಗೆ ತಿರುಗಿಸಲಾಗಿದ್ದು, ಆರು ವಿಮಾನಗಳ ನಿರ್ಗಮನಗಳು ವಿಳಂಬವಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದರು.

ಇದನ್ನು ಓದಿ: ಸಿಎಂ ಮೊಮ್ಮಗನ ಜೊತೆ ಖ್ಯಾತ ನಟಿ ಏವಾಗ್ರಿನ್ ಬ್ಯುಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್; ಫೋಟೋಗಳು ಭಾರಿ ವೈರಲ್

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.