ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಆಲಿಕಲ್ಲು ಮಳೆ ಆಗಬಹುದು ಎಂದು ತಿಳಿಸಿದೆ.
ಇದನ್ನು ಓದಿ: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್; ಬರೋಬ್ಬರಿ 1,30,000 ಹುದ್ದೆಗಳ ಭರ್ತಿಗೆ ಅಧಿಸೂಚನೆ!
ಹೌದು, ಹಾವೇರಿ, ಧಾರವಾಡ, ಕಲಬುರಗಿ, ಗದಗ, ಬೆಳಗಾವಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ, ದೇಶದಾತ್ಯಂತ ಹೊಸ ನಿಯಮ ಜಾರಿ!
ಇನ್ನು, ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಇಂದೂ ಸಹ ಮಳೆಯಾಗಲಿದ್ದು, ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೂ ಮೋಡ ಮುಸುಕಿದ ವಾತಾವರಣ ಕಂಡುಬರಲಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜ್ಯದ ಕೆಲವೆಡೆ ಮೋಡ ಕವಿಯಲಿದ್ದು, ಸಂಜೆ ತುಂತುರು ಮಳೆಯಾಗಲಿದೆ ಎನ್ನಲಾಗಿದೆ.
ಇದನ್ನು ಓದಿ: EPFOನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ