ಬೆಂಗಳೂರು: ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 70ನೇ ವರ್ಷದ ಜನ್ಮದಿನದ ಸಂಭ್ರಮ. ನಮೋ ಹುಟ್ಟುಹಬ್ಬಕ್ಕೆ ನಾಡಿನ ಹಲವು ಗಣ್ಯರು ಶುಭಕೋರಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಯಡಿಯೂರಪ್ಪ, ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ರಾಹುಲ್ ಗಾಂಧಿ ಶುಭ ಕೋರಿದ್ದು, ಸಾವಿರಾರು ಮಂದಿ ರೀ-ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Wishing PM Narendra Modi ji a happy birthday.
— Rahul Gandhi (@RahulGandhi) September 17, 2020
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
Warm Birthday Greetings to our Prime Minister Shri @narendramodi Ji.
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ.#HappyBirthdayPMModi pic.twitter.com/TSg1ikVdR0
— B.S. Yediyurappa (@BSYBJP) September 17, 2020
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ.
My greetings to the Hon’ble Prime Minister Shri @narendramodi Ji on his 70th Birthday. I wish him a healthy and successful year ahead.
— Mamata Banerjee (@MamataOfficial) September 17, 2020