Annabhagya Yojana: ಬಿಪಿಎಲ್‌ ಕಾರ್ಡ್‌ ಇದ್ರೂ ಇವರಿಗೆ ಅಕ್ಕಿ ಹಣ ಸಿಗಲ್ಲ; ಅನ್ನಭಾಗ್ಯ ಹಣ ಪಡೆಯಲು ಹೀಗೆ ಮಾಡಲೇಬೇಕು…!

Annabhagya Yojana: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡಲು ಈಗಾಗಲೇ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಜುಲೈ 20ರೊಳಗಾಗಿ ಕಾರ್ಡ್‌ ಮುಖ್ಯಸ್ಥರ ಬ್ಯಾಂಕ್‌ ಖಾತೆಯ ವಿವರ ನೀಡಲು ಸೂಚನೆ ನೀಡಲಾಗಿದ್ದು,…

Annabhagya Yojana

Annabhagya Yojana: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡಲು ಈಗಾಗಲೇ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಜುಲೈ 20ರೊಳಗಾಗಿ ಕಾರ್ಡ್‌ ಮುಖ್ಯಸ್ಥರ ಬ್ಯಾಂಕ್‌ ಖಾತೆಯ ವಿವರ ನೀಡಲು ಸೂಚನೆ ನೀಡಲಾಗಿದ್ದು, ಕಳೆದ ಮೂರು ತಿಂಗಳುಗಳಲ್ಲಿ ಪಡಿತರ ಸೌಲಭ್ಯ ಪಡೆದಿದ್ದರೆ ಮಾತ್ರ ಅನ್ನಭಾಗ್ಯ ನಗದು ವರ್ಗಾವಣೆಗೆ ಕುಟುಂಬ ಅರ್ಹವಾಗಲಿದೆ.

Annabhagya Yojana: ಬಿಪಿಎಲ್‌ ಕುಟುಂಬಗಳಲ್ಲಿ ಇಬ್ಬರು ಮುಖ್ಯಸ್ಥರಿದ್ದರೆ ಹಣ ಸಿಗುತ್ತಾ?

Annabhagya Yojana
Annabhagya Yojana

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಬಿಪಿಎಲ್‌ ಕುಟುಂಬಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲು ಸರ್ಕಾರ ನಿರ್ಧರಿಸಿದೆ. ಕುಟುಂಬದ ಮುಖ್ಯಸ್ಥರನ್ನು ಕುಟುಂಬಗಳು ಆಯ್ಕೆ ಮಾಡಿಕೊಳ್ಳಬೇಕು. ಮಹಿಳಾ ಸದಸ್ಯರಿರುವ ಬಿಪಿಎಲ್‌ ಕಾರ್ಡ್‌ಗಳಲ್ಲಿ ಮಹಿಳೆಯರನ್ನು ಕುಟುಂಬದ ಮುಖ್ಯಸ್ಥರನ್ನಾಗಿ ನೇಮಿಸಬೇಕಾಗಿದ್ದು, ಪ್ರಮುಖವಾಗಿ ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಜೋಡಣೆ ಮಾಡಬೇಕು.

ಇದನ್ನು ಓದಿ: ಜುಲೈ 10 ರಿಂದ ನಿಮ್ಮ ಖಾತೆಗೆ ಹಣ; ಈ ಯೋಜನೆಯಡಿ 170 ರೂ., 340 ರೂ., 850 ರೂ. ಹೀಗೆ ಸಿಗುತ್ತೇ..ಅಕ್ಕಿ ಹಣ..

Vijayaprabha Mobile App free

Annabhagya Yojana: ಅನ್ನಭಾಗ್ಯ ಹಣ ಬೇಕೆ? ಹೀಗೆ ಮಾಡಲೇಬೇಕು..

ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ನೂತನ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಒಂದು ಕುಟುಂಬದಲ್ಲಿ ಇಬ್ಬರು ಮುಖ್ಯಸ್ಥರಿದ್ದರೆ ಅವರಿಗೆ ಐದು ಕೆಜಿ ಅಕ್ಕಿಯ ದರದ ಹಣ ಕೊಡದಿರಲು ಸರ್ಕಾರ ನಿರ್ಧರಿಸಿದೆ. ಮುಖ್ಯಸ್ಥ ಯಾರು ಎಂಬುದನ್ನು ಕುಟುಂಬ ತೀರ್ಮಾನ ತೆಗೆದುಕೊಂಡು ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಬೇಕಿರುತ್ತದೆ. ಇದರ ಜೊತೆಗೆ ಅಂತ್ಯೋದಯ ಕಾರ್ಡ್‌ ಇರುವ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಕ್ಕೆ ಹಣ ವರ್ಗಾವಣೆ ಮಾಡದಿರಲು ಸರ್ಕಾರ ನಿರ್ಧಾರ ಮಾಡಿದೆ.

ಇದನ್ನು ಓದಿ: ಇಂದು ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Annabhagya Yojana: ಅಕ್ಕಿ ಹಣ ಪಡೆಯಲು ಈ ದಿನದೊಳಗೆ ಮಾಹಿತಿ ನೀಡಿ!

ಜುಲೈ 20ರೊಳಗಾಗಿ ತಮ್ಮ ಬ್ಯಾಂಕ್‌ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಚೀಟಿ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ದುಡ್ಡು ಸಿಗಲಿದೆ ಸರ್ಕಾರದ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದ್ದು, ಬ್ಯಾಂಕ್ ಖಾತೆಯ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲೇ ನೀಡಬೇಕು ಎಂದು ಸರ್ಕಾರ ತಿಳಿಸಿದೆ. ಬಿಪಿಎಲ್‌ ಕಾರ್ಡ್‌ಗಳಲ್ಲಿ ಮಹಿಳೆಯರನ್ನು ಕುಟುಂಬದ ಮುಖ್ಯಸ್ಥರನ್ನಾಗಿ ನೇಮಿಸಬೇಕು. ಪ್ರಮುಖವಾಗಿ ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಜೋಡಣೆ ಮಾಡಬೇಕು.

Annabhagya Yojana: ‘ಅನ್ನಭಾಗ್ಯ’ ಯೋಜನೆಗೆ ಮತ್ತೆರಡು ಷರತ್ತು!

  • ಜುಲೈ 10ಕ್ಕೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಹಾಕುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದೀಗ ಈ ಯೋಜನೆಗೆ ಸಂಬಂಧಿಸಿದಂತೆ ಮತ್ತೆರಡು ಷರತ್ತುಗಳನ್ನು ವಿಧಿಸಿದೆ.
  • ಅಂತ್ಯೋದಯ ಕಾರ್ಡ್‌ಗೆ ಈಗ 35KG ಅಕ್ಕಿ ನೀಡಲಾಗುತ್ತಿದ್ದು, ಈ ಕಾರ್ಡ್ ನಲ್ಲಿ ಮೂವರು ಅಥವಾ ಅದಕ್ಕಿಂತ ಕಡಿಮೆ ಜನರಿದ್ದರೆ ಅಕ್ಕಿಯ ಬದಲಾಗಿ ಹಣ ಕೊಡುವುದಿಲ್ಲ.
  • ಕಳೆದ ಮೂರು ತಿಂಗಳಿನಿಂದ ಅಕ್ಕಿಯನ್ನು ಪಡೆದುಕೊಳ್ಳದ ಕುಟುಂಬಗಳಿಗೆ ಅಕ್ಕಿಯ ಬದಲಾಗಿ ಹಣವನ್ನು ವಿತರಣೆ ಮಾಡುವುದಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿ: ಯಾವ ಇಲಾಖೆಗೆ ಎಷ್ಟು ಕೋಟಿ? ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.