Subsidy: ರೈತರಿಂದ ಸೋಲಾರ್ ಪಂಪ್’ಸೆಟ್ ಸೇರಿದಂತೆ ಕೃಷಿ ಉಪಕರಣಗಳ ಖರೀದಿಗೆ ಅರ್ಜಿ ಅಹ್ವಾನ; ಶೇ 90ರಷ್ಟು ಸಹಾಯಧನ!

Solar Pumpset & Irrigation Machinery Subsidy: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭುಜಲ್ ಯೋಜನೆ ಮೂಲಕ ಹನಿ ಮತ್ತು ತುಂತುರು ನೀರಾವರಿ ಘಟಕಗಳ ನಿರ್ಮಾಣ, ಯಂತ್ರೋಪಕರಣಗಳ ಖರೀದಿ ಮತ್ತು…

Solar Pumpset Subsidy

Solar Pumpset & Irrigation Machinery Subsidy: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭುಜಲ್ ಯೋಜನೆ ಮೂಲಕ ಹನಿ ಮತ್ತು ತುಂತುರು ನೀರಾವರಿ ಘಟಕಗಳ ನಿರ್ಮಾಣ, ಯಂತ್ರೋಪಕರಣಗಳ ಖರೀದಿ ಮತ್ತು ಸೌರಶಕ್ತಿ ಚಾಲಿತ ಪಂಪ್‌ಸೆಟ್‌ಗಳ ಖರೀದಿಗೆ ಸಹಾಯಧನಕ್ಕಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಸೆಪ್ಟೆಂಬರ್ 18ರವರೆಗೆ ಭಾರೀ ಮಳೆ

ತುಂತುರು ನೀರಾವರಿ ಘಟಕಗಳ ನಿರ್ಮಾಣಕ್ಕೆ ಅರ್ಜಿ ಅಹ್ವಾನ- Sprinkler Irrigation Unit

Sprinkler Irrigation Unit
Sprinkler Irrigation Unit subsidy

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮತ್ತು ಅಟಲ್ ಭೂಜಲ್ ಯೋಜನೆ ಅಡಿಯಲ್ಲಿ ಅರ್ಹರಾಗಿರುವ ರೈತರು 90% ರಿಯಾಯಿತಿ ದರದಲ್ಲಿ ಹನಿ ಮತ್ತು ತುಂತುರು ನೀರಾವರಿ ವ್ಯವಸ್ಥೆಯನ್ನು ಸ್ಥಾಪಿಸಲು ಅರ್ಜಿ ಸಲ್ಲಿಸಬಹುದು.ಇನ್ನು, ಅರ್ಜಿಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು ಮತ್ತು ಕೆ-ಕಿಸಾನ್ ತಂತ್ರದಲ್ಲಿ ನೋಂದಾಯಿಸಿಕೊಳ್ಳಬೇಕು.

Vijayaprabha Mobile App free

ಇದನ್ನೂ ಓದಿ: ಕೇವಲ 600 ರೂಪಾಯಿಗೆ ಕೃಷಿ ಡ್ರೋನ್; ಏಳೆಂಟು ನಿಮಿಷದಲ್ಲಿ ಒಂದು ಎಕರೆ ಔಷಧಿ ಸಿಂಪಡಣೆ!

ಅರ್ಜಿ ಸಲ್ಲಿಸಲು ಇಚ್ಛಿಸುವ ರೈತರು ಅರ್ಜಿ ಪ್ರತಿ, ಜಮೀನು ಮಾಲೀಕತ್ವದ ಪುರಾವೆ, ಬೆಳೆ ದೃಢೀಕರಣ, ಕೊಳವೆ ಬಾವಿಯ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರಗಳು, 20 ರೂಪಾಯಿ ಸ್ಟಾಂಪ್ ಪೇಪರ್ ಸೇರಿದಂತೆ ವಿವಿಧ ದಾಖಲೆಗಳನ್ನು ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಾಗಿದ್ದರೆ ಜಾತಿ ಪ್ರಮಾಣಪತ್ರ ಸಲ್ಲಿಸಬೇಕು. ರೈತರು ಯಾವುದೇ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಚಿಕ್ಕಬಳ್ಳಾಪುರದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸೌರಶಕ್ತಿ ಚಾಲಿತ ಪಂಪ್ ಸೆಟ್ ಖರೀದಿಸಲು ಸರ್ಕಾರದಿಂದ ಸಹಾಯಧನ- Solar Pumpset

Solar Pumpset Subsidy
Solar Pumpset Subsidy

ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಭಾಗವಾಗಿ ಹನಿ ನೀರಾವರಿ ಉಪಕರಣಗಳು ಮತ್ತು ಸೌರಶಕ್ತಿ ಚಾಲಿತ ಪಂಪ್ ಸೆಟ್‌ಗಳ ಮೇಲಿನ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಇದನ್ನೂ ಓದಿ: ಬರಪೀಡಿತ ಪ್ರದೇಶಗಳ ಘೋಷಣೆ; ಯಾವ ಬೆಳೆಗೆ ಎಷ್ಟು ಪರಿಹಾರ ? ಇಲ್ಲಿದೆ ನೋಡಿ ಮಾಹಿತಿ

ಆಸಕ್ತ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ರೈತರು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 20 ರೊಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಿಗೆ ಸಲ್ಲಿಸಬಹುದು. ಅರ್ಜಿಯಲ್ಲಿ ತಮ್ಮ ಪ್ರಸಕ್ತ ಸಾಲಿನ ಪಹಣಿ, ತಮ್ಮ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ, ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ಆರ್‌ಡಿ ಸಂಖ್ಯೆಯೊಂದಿಗೆ ಜಾತಿ ಪ್ರಮಾಣಪತ್ರ ಸಲ್ಲಿಸಬೇಕು.

ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಲು ಸಹಾಯಧನ- Drip Irrigation System

Drip irrigation system subsidy

ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನ ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳಿಗೆ ಅನುಗುಣವಾಗಿ ಸಹಾಯಧನವನ್ನು ನೀಡಲು ಅರ್ಜಿಗಳನ್ನು ಕೋರಲಾಗಿದೆ. ಆಹ್ವಾನಿಸಲಾಗಿದೆ.

ಇನ್ನು, ನೀರಾವರಿ ಸೌಲಭ್ಯವಿರುವ ತೋಟಗಾರಿಕೆಯಲ್ಲಿ ತೊಡಗಿರುವ ರೈತರು ತಮ್ಮ ಜಮೀನಿನಲ್ಲಿ ಹನಿ ನೀರಾವರಿ ಅಳವಡಿಸಲು ಆಸಕ್ತಿ ಇದ್ದಲ್ಲಿ, ತಮ್ಮ ವ್ಯಾಪ್ತಿಯ ತಾಲೂಕು ಕಚೇರಿ ಅಥವಾ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿರುವ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಇನ್ಮುಂದೆ ಆಧಾರ್, ಡ್ರೈವಿಂಗ್, ವಿವಾಹ ನೋಂದಣಿ ಎಲ್ಲದಕ್ಕೂ ಒಂದೇ ಕಡ್ಡಾಯ ದಾಖಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು: ದೊಡ್ಡಬಳ್ಳಾಪುರ : 080-27623770/ 9880210892,ಹೊಸಕೋಟೆ : 080-27904760/ 8217210320, ನೆಲಮಂಗಲ : 080-27726213/ 9880461607, ದೇವನಹಳ್ಳಿ : 080-27681204/ 9480461234,

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.