Onion price: ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಏರಿಕೆ ಬೆನ್ನಲ್ಲೇ ಈಗ ಈರುಳ್ಳಿ ದರವೂ ದಿಢೀರ್ ಏರಿಕೆ ಆಗಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಕೇಂದ್ರವು ಈರುಳ್ಳಿ ರಫ್ತು ನಿಷೇಧ ಹಿಂದಕ್ಕೆ ಪಡೆದ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ.
ಇದನ್ನು ಓದಿ: ನಿಮ್ಮ ಖಾತೆಗೆ 10,000ರೂ..ಹೀಗೆ ಮಾಡಿ
ಹೌದು, ದೇಶದ ಅತಿ ದೊಡ್ಡ ಈರುಳ್ಳಿ ಮಾರುಕಟ್ಟೆ ಲಾಸಲ್ ಗಾಂವ್ APMCಯಲ್ಲಿ ಈರುಳ್ಳಿ ದರ ಶೇ.40ರಷ್ಟು ಏರಿಕೆಯಾಗಿದೆ. ಪ್ರತಿ ಕ್ವಿಂಟಾಲ್ ಬೆಲೆ ₹1,280-₹1,800ಕ್ಕೆ ಹೆಚ್ಚಳವಾಗಿದೆ. ಕನಿಷ್ಠ ಬೆಲೆ ₹1,000 ಹಾಗೂ ಗರಿಷ್ಠ ದರ ₹2,100 ಏರಿಕೆ ಆಗಿದೆ. ಕೇಂದ್ರ ಈರುಳ್ಳಿ ರಫ್ತು ನಿಷೇಧ ಹಿಂಪಡೆದ ಬೆನ್ನಲ್ಲೇ ಇಷ್ಟೊಂದು ಪ್ರಮಾಣದಲ್ಲಿ ದರ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸದ್ಯ ಕೆಜಿಗೆ ₹20-₹25 ಇದೆ.
Onion price: ಕ್ವಿಂಟಾಲ್ಗೆ 500 ರೂ. ಏರಿಕೆ ಕಂಡ ಈರುಳ್ಳಿ ಬೆಲೆ
ದೇಶದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾದ ಲಸಲ್ಗಾಂವ್ನಲ್ಲಿ ಸಾಮಾನ್ಯ ಈರುಳ್ಳಿಯ ಸಗಟು ಮಾರಾಟ ದರ ಕ್ಷಿಂಟಾಲ್ಗೆ 1800 ರೂಪಾಯಿ ಏರಿಕೆ ಕಂಡಿದೆ. ಇದೇ ಈರುಳ್ಳಿ ದರ ಫೆ 17ರಂದು ಕ್ವಿಂಟಾಲ್ಗೆ 1,280 ರೂಪಾಯಿ ಇದ್ದಿದ್ದು ಕೇವಲ ಮೂರೇ ದಿನಕ್ಕೆ 520 ರೂಪಾಯಿಯಷ್ಟು ಹೆಚ್ಚಳವಾಗಿದೆ.
ಇದನ್ನು ಓದಿ: LPG ಸಿಲಿಂಡರ್ ಸಬ್ಸಿಡಿ ಪಡೆಯಲು ಕೆವೈಸಿ ಕಡ್ಡಾಯ; KYC ಮಾಡುವುದು ಹೇಗೆ?
ಈರುಳ್ಳಿ ರಫ್ತು ನಿಷೇಧ ಮಾರ್ಚ್ 31ರವರೆಗೆ ಮುಂದುವರಿಕೆ: ಕೇಂದ್ರ ಸ್ಪಷ್ಟನೆ
ಈರುಳ್ಳಿ ರಫ್ತಿನ ಮೇಲಿನ ನಿಷೇಧ ಮಾರ್ಚ್ 31ರವರೆಗೂ ಮುಂದುವರೆಯಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರವು ದೇಶೀಯ ಮಟ್ಟದಲ್ಲಿ ಈರುಳ್ಳಿಯ ಲಭ್ಯತೆಯನ್ನು ಹೆಚ್ಚಿಸಲು & ಬೆಲೆಗಳನ್ನು ನಿಯಂತ್ರಣದಲ್ಲಿಡಲು ಬಯಸುತ್ತಿದೆ. ಈ ಕಾರಣದಿಂದ ರಫ್ತು ನಿಷೇಧ ಮುಂದುವರಿಯಲಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಈ ಹಿಂದೆ ಈರುಳ್ಳಿ ದರ ಕಡಿಮೆಯಾಗಿದ್ದರಿಂದ ರಫ್ತಿನ ಮೇಲಿನ ನಿಷೇಧವನ್ನು ತೆಗೆದುಹಾಕಲಾಗುತ್ತದೆ ಎಂದು ವರದಿಯಾಗಿತ್ತು
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |