ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ಜೂ.30ರಂದು ನಡೆಸಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ-2024) ಪ್ರವೇಶ ಪತ್ರಗಳನ್ನು ಇಲಾಖೆ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಪರೀಕ್ಷೆಯು ಜೂ.30ರಂದು ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಪತ್ರಿಕೆ-1 ಮತ್ತು 2 ನಡೆಯಲಿದೆ.
ಪ್ರವೇಶ ಪತ್ರಗಳನ್ನು ಜೂ.20ರಿಂದ ಇಲಾಖೆ ವೆಬ್ಸೈಟ್ http://schooleducation.karnataka.gov.in/ ನಲ್ಲಿ ಲಭ್ಯವಾಗಲಿದೆ. ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅದರಂತೆ ಸಿದ್ಧತೆಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. ಆಯಾ ಜಿಲ್ಲೆಯ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಒಳಗೊಂಡ ಪಟ್ಟಿಯನ್ನೂ ಸಹ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.