ಜೈಲಿನಲ್ಲಿ ದರ್ಶನ್‌ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ, ನಟ ವಿನೋದ್ ಪ್ರಭಾಕರ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ವಿಚಾರಣಾಧೀನ ಕೈದಿ ನಟ ದರ್ಶನ್ ನೋಡಲು ಆತನ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ನಟಿ ಪವಿತ್ರಾಗೌಡ…

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ವಿಚಾರಣಾಧೀನ ಕೈದಿ ನಟ ದರ್ಶನ್ ನೋಡಲು ಆತನ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.

ನಟಿ ಪವಿತ್ರಾಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ ಎಂಬ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ದರ್ಶನ್ ಅಂಡ್ ಗ್ಯಾಂಗ್ ಈಗ ಜೈಲು ಸೇರಿದೆ. ನಟ ದರ್ಶನ್, ಆತನ 2ನೇ ಹೆಂಡತಿ ನಟಿ ಪವಿತ್ರಾಗೌಡ, ನಟ ಪ್ರದೂಶ್ ಸೇರಿ ಒಟ್ಟು 16 ಜನರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಆದರೆ, ಮೊದಲ ಪತ್ನಿ ವಿಜಯಲಕ್ಷ್ಮಿ ಅವರು ಗಂಡ ಜೈಲು ಸೇರಿದ 3ನೇ ದಿನ ಆತನನ್ನು ನೋಡಲು ಜೈಲಿಗೆ ಆಗಮಿಸಿದ್ದಾರೆ. ಜೈಲಿನಲ್ಲಿ ಎರಡು ದಿನ ಕಳೆದಿರುವ ನಟ ದರ್ಶನ್ ನೋಡಲು ಆತನ ಆಪ್ತ ಸ್ನೇಹಿತ ನಟ ವಿನೋದ್ ಪ್ರಭಾಕರ್ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಇವರನ್ನು ಪೊಲೀಸರು ಹಂತ ಹಂತವಾಗಿ ತಪಾಸಣೆ ಮಾಡಿ ಜೈಲಿನ ಒಳಗೆ ನೋಡಲು ಅವಕಾಶ ಕೊಡಲು ಮುಂದಾಗಿದ್ದಾರೆ. ಗೇಟಿನ ಹೊರಗೆ ಕಾರನ್ನು ನಿಲ್ಲಿಸಿ ಸಾಮಾನ್ಯ ಜನರಂತೆ ನಡೆದುಕೊಂಡ ಹೋದ ವಿನೋದ್ ಪ್ರಭಾಕರ್ ಅವರಿಗೆ ಮೊಬೈಲ್ ನಿಷೇಧದ ಬಗ್ಗೆ ಮಾಹಿತಿ ನೀಡಿ ನಂತರ ಒಳಗೆ ಬಿಡಲು ಮುಂದಾಗಿದ್ದಾರೆ. ಇನ್ನು ನಟ ದರ್ಶನ್ ಮತ್ತು ವಿನೋದ್ ಪ್ರಭಾಕರ್ ಸ್ನೇಹಿತರಾಗಿದ್ದು ‘ನವಗ್ರಹ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಭೇಟಿಗೆ ಅವಕಾಶ ಕೇಳಿದ್ದೆ, ಒಳಗೆ ಬಿಟ್ರೆ ಭೇಟಿ ಆಗುತ್ತೇನೆ. ಕುಟುಂಬದವರಿಗೆ ಮಾತ್ರ ಅವಕಾಶ ಅಂತ ಹೇಳಿದ್ದಾರೆ. ನೊಡೋಣ ಒಳಗಡೆ ಹೋಗಿ ಅಧಿಕಾರಿಗಳಿಗೆ ಕೇಳಿ ಭೇಟಿ ಆಗ್ತೇನೆ ಎಂದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.