(agriculture department) ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಬಹುದಿನಗಳ ಬೇಡಿಕೆಯಾಗಿದ್ದ ಕೃಷಿ ಇಲಾಖೆಯಲ್ಲಿನ ಹುದ್ದೆಗಳ ಭರ್ತಿ ಪ್ರಸ್ತಾವನೆಗೆ ಈಗ ಮಂಜೂರಾತಿ ಸಿಕ್ಕಿದೆ ಎನ್ನುವ ಅಧಿಕೃತ ಮಾಹಿತಿ ಮಾನ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರಿಂದಲೇ ಹೊರ ಬಿದ್ದಿದೆ.
ಹೌದು, ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆಸಿದ ಚೆಲುವರಾಯ ಸ್ವಾಮಿಯವರು, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೊರತೆಯು ರೈತನಿಗೆ ಸಮಸ್ಯೆ ತರುತ್ತದೆ. ಹಾಗಾಗಿ ಕೃಷಿ ಇಲಾಖೆಗಳಲ್ಲಿ ತೆರವಾಗುವಂತಹ ಹುದ್ದೆಗಳಿಗೆ ಕೂಡಲೆ ಸೂಕ್ತ ನೇಮಕಾತಿ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಡಿನ ಎಲ್ಲ ರೈತರ ಕೋರಿಕೆ. ಬಹು ಮುಖ್ಯವಾಗಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಬಗ್ಗೆ ಕೂಡ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಈ ಪ್ರಕಾರವಾಗಿ 600 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಂಜುರಾತಿ ನೀಡಿರುವುದಾಗಿ ಮುಂದಿನ ಹಂತದ ಪ್ರಕ್ರಿಯೆಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಲಾಗಿದೆ ಎಂಬುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ:
600
ಹುದ್ದೆಗಳ ವಿವರ:
* ಕೃಷಿ ಅಧಿಕಾರಿಗಳು
* ಸಹಾಯಕ ಕೃಷಿ ಅಧಿಕಾರಿಗಳು
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ:
600
ಹುದ್ದೆಗಳ ವಿವರ:
* ಕೃಷಿ ಅಧಿಕಾರಿಗಳು
* ಸಹಾಯಕ ಕೃಷಿ ಅಧಿಕಾರಿಗಳು
ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:
* ಶೀಘ್ರದಲ್ಲಿಯೇ ಇಲಾಖೆ ಕಡೆಯಿಂದ ಈ ಕುರಿತಾದ ಮಾರ್ಗಸೂಚಿ ಬಿಡುಗಡೆ ಆಗಲಿದೆ.