ದರ್ಶನ್‌ಗೆ ನಾನೊಬ್ಬಳೆ​ ಪತ್ನಿ ಪವಿತ್ರಾಗೌಡ ಅಲ್ಲ: ಪೊಲೀಸ್​ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ!

ಬೆಂಗಳೂರು: ನಟ ದರ್ಶನ್‌ ಪತ್ನಿ ಕುರಿತು ಪೊಲೀಸ್‌ ದಾಖಲೆಗಳಲ್ಲಿ ಸರಿಯಾದ ಮಾಹಿತಿ ದಾಖಲಿಸುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ದಯಾನಂದ್‌ ಅವರಿಗೆ ಪತ್ರ ಬರೆದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ…

ಬೆಂಗಳೂರು: ನಟ ದರ್ಶನ್‌ ಪತ್ನಿ ಕುರಿತು ಪೊಲೀಸ್‌ ದಾಖಲೆಗಳಲ್ಲಿ ಸರಿಯಾದ ಮಾಹಿತಿ ದಾಖಲಿಸುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ದಯಾನಂದ್‌ ಅವರಿಗೆ ಪತ್ರ ಬರೆದಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು ದರ್ಶನ್​ ಪತ್ನಿ ಎಂದು ಹೇಳಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಶ್ರೀಮತಿ ಪವಿತ್ರಾ ಗೌಡ ಬಗ್ಗೆ ದಾಖಲೆಗಳಲ್ಲಿ ಸರಿಯಾದ ಮಾಹಿತಿ ಉಲ್ಲೇಖಿಸುವಂತೆ ಮನವಿ ಮಾಡಿದ್ದಾರೆ.” ಸುದ್ದಿಗೋಷ್ಠಿಯಲ್ಲಿ ನೀವು ದರ್ಶನ್ ರ ಎರಡನೇ​ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಹೀಗಾಗಿ ರಾಷ್ಟ್ರಮಟ್ಟದ ಮಾಧ್ಯಮಗಳು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ದಂಪತಿ ಬಂಧನ​ ಅಂತ ಸುದ್ದಿ ಮಾಡಿವೆ. ಇದು ನನ್ನ ಮತ್ತು ನನ್ನ ಮಗ ವಿನೀಶ್​ ಗೆ ಮುಂದಿನ ದಿನಗಳಲ್ಲಿ ತೊಂದರೆ ಆಗಬಾರದು. ಪೊಲೀಸ್​ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಪತ್ರದಲ್ಲಿ ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ.

Vijayaprabha Mobile App free

ಪವಿತ್ರಾಗೌಡ ದರ್ಶನ್ ಪತ್ನಿಯಲ್ಲ ಆಕೆ ನನ್ನ ಗಂಡನ ಸ್ನೇಹಿತೆ ಅಷ್ಟೆ. ದರ್ಶನ್​ ಅವರನ್ನು ನಾನು ಮಾತ್ರ ಕಾನೂನಾತ್ಮಕವಾಗಿ ಮದುವೆ ಆಗಿದ್ದೇನೆ. ನಮ್ಮ ಮದುವೆ 2003ರ ಮೇ 19ರಂದು ಧರ್ಮಸ್ಥಳದಲ್ಲಿ ನಡೆದಿತ್ತು ಎಂದು ವಿಜಯಲಕ್ಷ್ಮಿ ಅವರು ಈ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.

ಶ್ರೀಮತಿ ಪವಿತ್ರಾ ಗೌಡ ಅವರು ಶ್ರೀ ಸಂಜಯ್‌ ಸಿಂಗ್‌ ಅವರನ್ನು ವಿವಾಹವಾಗಿದ್ದಾರೆ. ಅವರಿಗೆ ಮಗಳಿದ್ದಾಳೆ. ಎಲ್ಲಾ ಪೊಲೀಸ್‌ ಫೈಲ್‌ಗಳಲ್ಲಿ ಈ ಮಾಹಿತಿಯನ್ನು ಸರಿಪಡಿಸುವಂತೆ ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಭವಿಷ್ಯದಲ್ಲಿ ನನಗೆ ಪವಿತ್ರಾ ಗೌಡರನ್ನು ತಪ್ಪಾಗಿ ಪತ್ನಿ ಎಂದು ನಮೂದಿಸಿರುವ ವಿಚಾರದಲ್ಲಿ ಯಾವುದೇ ತೊಂದರೆಯಾಗಬಾರದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.