ಈ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ, 17,000ದಿಂದ ಸಂಬಳ

(District Court) ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಇಲ್ಲಿದೆ.…

(District Court) ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಇಲ್ಲಿದೆ.

ಹುದ್ದೆ ವಿವರ:
ಜವಾನ

ಹುದ್ದೆಗಳ ಸಂಖ್ಯೆ:
26

Vijayaprabha Mobile App free

ಉದ್ಯೋಗ ಸ್ಥಳ:
ಹಾವೇರಿ ಜಿಲ್ಲಾ ನ್ಯಾಯಾಲಯ

ವೇತನ ಶ್ರೇಣಿ:
17,000-28,950

ವಿದ್ಯಾರ್ಹತೆ:
* SSLC ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.

ವಯೋಮಿತಿ:
* ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು.
* ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ವಿಧಾನ:
* ಕನ್ನಡ ಓದಲು ಮತ್ತು ಬರೆಯಲು ಅಭ್ಯರ್ಥಿ ಹೊಂದಿರುವ ಸಾಮರ್ಥ್ಯ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನ ಇರುತ್ತದೆ.
* ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ 1:10 ರ ಅನುಪಾತದಲ್ಲಿ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು.
* ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ. ಸದರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದಲ್ಲಿ ಆಯ್ಕೆಗೆ ಅರ್ಹರಾಗುವುದಿಲ್ಲ.

ಅರ್ಜಿ ಶುಲ್ಕ ವಿವರ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 100
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://haveri.dcourts.gov.in/online-recruitment/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
03-07-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
01-08-2024

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.