ಸೆ.15 ರವರೆಗೆ ‘HSRP’ ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಣೆ: ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ…

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.