KSRTC ಬಸ್ ನಲ್ಲೂ ಇನ್ಮುಂದೆ ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿಸಲು ಶೀಘ್ರ ಕ್ರಮ ಜಾರಿ

ಬೆಂಗಳೂರು : ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್​​ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್​ಆರ್​ಟಿಸಿ ಮುಂದಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ…

ಬೆಂಗಳೂರು : ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್​​ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್​ಆರ್​ಟಿಸಿ ಮುಂದಾಗಿದೆ.

ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಕೆಎಸ್​ಆರ್​ಟಿಸಿ ಮುಂದಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ.

ಕಾರ್ಡ್​​​ಗಳನ್ನು ಬಳಸಿಯೂ ಪಾವತಿ ಮಾಡಬಹುದು!

Vijayaprabha Mobile App free

ಖಾಸಗಿ ಕಂಪೆನಿಯಿಂದ ಒಂದು ಮಷಿನ್​​ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್​​ಗಳ ಖರೀದಿಗೆ ಕೆಎಸ್​ಆರ್​ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ. ಈ ನೂತನ ಮಷಿನ್​​ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್​​​ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು.

6500 ಬಸ್​ಗಳಿಗೆ ಹೊಸ ಮಷಿನ್

ಸದ್ಯ ಈಗ ಇರುವ ಮಷಿನ್​​ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್​ನಿಂದ ಇದು ತಪ್ಪಲಿದೆ. ಇತ್ತೀಚೆಗೆ ಕೆಎಸ್​ಆರ್​ಟಿಸಿ ಬಸ್​​​ಗಳಲ್ಲಿ ಪ್ರಯಾಣ ಮಾಡುವ ಹೆಚ್ಚಿನವರ ಬಳಿ ಕ್ಯಾಶ್ ಇರುವುದಿಲ್ಲ. ಹಾಗಾಗಿ ಪ್ರಯಾಣಿಕರ ಅನಕೂಲಕ್ಕಾಗಿ ಇಟಿಎಂ ಸಹಕಾರಿ ಆಗಲಿದೆ. ನಿಗಮದ 6500 ಬಸ್ಸುಗಳಲ್ಲೂ ಹೊಸ ವ್ಯವಸ್ಥೆ ಪರಿಚಯ ಮಾಡಲಾಗುತ್ತದೆ. ಶಕ್ತಿ ಯೋಜನೆಯ ಪಿಂಕ್‌ ಟಿಕೆಟ್​​​ಗಳನ್ನು ಈ ಇಟಿಎಂ ಮಷಿನ್ ಗಳಲ್ಲಿ ಸ್ಕ್ಯಾನ್ ಮಾಡಿ ಅವಕಾಶ ನೀಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಕೂಡ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.

ಈ ಹಿಂದೆ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಮಷಿನ್​​ಗಳು ಕೈಕೊಟ್ಟು ಕಂಡಕ್ಟರ್​​ಗಳು ತೊಂದರೆ ಅನುಭವಿಸುತ್ತಿದ್ದರು. ನಂತರ ಹೊಸ ತಂತ್ರಜ್ಞಾನದ ಮಷಿನ್ ಖರೀದಿ ಮಾಡಲಾಗಿತ್ತು. ಇದೀಗ ಕೆಎಸ್​ಆರ್​ಟಿಸಿ ಕೂಡ ಹೊಸ ತಂತ್ರಜ್ಞಾನದ ಮಷಿನ್​ಗಳನ್ನು ಖರೀದಿ ಮಾಡಲು ಮುಂದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.