ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಬೆಂಗಳೂರಿನಲ್ಲಿ ಬಾಲಕ ಸಾವು..!

ಬೆಂಗಳೂರು: ರಾಜ್ಯದಲ್ಲಿ  ಜ್ವರದ ಅಬ್ಬರ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಕ್ಕಳ ಸಾವಿನ ನಂತರ ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಬೆಂಗಳೂರು: ರಾಜ್ಯದಲ್ಲಿ  ಜ್ವರದ ಅಬ್ಬರ ಹೆಚ್ಚಾಗುತ್ತಿದೆ. ಹಾಸನದಲ್ಲಿ ಮಕ್ಕಳ ಸಾವಿನ ನಂತರ ಬೆಂಗಳೂರಿನಲ್ಲಿ ಡೆಂಗ್ಯೂಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಂಜನಾಪುರದ 11 ವರ್ಷದ ಬಾಲಕ ಗಗನ್ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಬಾಲಕ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹಾಸನದಲ್ಲಿ ಡೆಂಗ್ಯೂ ಜ್ವರಕ್ಕೆ ಮಕ್ಕಳ ಸಾವು: ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಝೀಕಾ ವೈರಸ್​ಗೆ ವೃದ್ಧ ಬಲಿ: ಶಿವಮೊಗ್ಗದ ಗಾಂಧಿ ನಗರದಲ್ಲಿ ಝೀಕಾ ವೈರಸ್​ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್​​ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರಲ್ಲಿ ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಡಿಸ್ಚಾರ್ಜ್​ ಮಾಡಲಾಗಿತ್ತು. ಗುರುವಾರ ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ವೃದ್ಧ ಮೃತಪಟ್ಟಿದ್ದಾರೆ.

Vijayaprabha Mobile App free

ಚಿಕ್ಕಬಳ್ಳಾಪುರದಲ್ಲೂ ಡೆಂಗ್ಯೂಗೆ ವ್ಯಕ್ತಿ ಬಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ನಿವಾಸಿ ವೇಣು ಡೆಂಗ್ಯೂ ಜ್ವರಕ್ಕೆ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.