ಬಸ್ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಸಾರಿಗೆ ಸಂಸ್ಥೆಗಳಿಂದ ದರ ಹೆಚ್ಚಳಕ್ಕೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ, ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ ಸೇರಿದಂತೆ ಉಳಿದ 3 ನಿಗಮಗಳ ಬಸ್ ಪ್ರಯಾಣ ದರವನ್ನು 2020ರಲ್ಲಿ ಹೆಚ್ಚಿಸಲಾಗಿದೆ. ಬಿಎಂಟಿಸಿ ಪ್ರಯಾಣ ದರವನ್ನು 2014ರ ಬಳಿಕ ಜಾಸ್ತಿ ಮಾಡಿಲ್ಲ.
ಡೀಸೆಲ್ ಬೆಲೆ, ಸಿಬ್ಬಂದಿ ವೇತನ ಸೇರಿದಂತೆ ನಿರ್ವಹಣಾ ವೆಚ್ಚ ಜಾಸ್ತಿಯಾಗಿದೆ ಎಂದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.