ಹಿಟ್ ಆಂಡ್ ರನ್‌ಗೆ ಮಹಿಳೆ ಸಾವು; ಶಿವಸೇನೆ ನಾಯಕ ಪೊಲೀಸ್ ವಶಕ್ಕೆ

ಮುಂಬೈ: ಮೀನು ತರಲೆಂದು ಪತಿಯ ಜತೆ ಬೈಕ್ ನಲ್ಲಿ ತೆರಳಿದ್ದಾಗ ಬಿಎಂಡಬ್ಲ್ಯೂ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕ ರಾಜೇಶ್ ಶಾ ಅವರನ್ನು ಪೊಲೀಸರು…

ಮುಂಬೈ: ಮೀನು ತರಲೆಂದು ಪತಿಯ ಜತೆ ಬೈಕ್ ನಲ್ಲಿ ತೆರಳಿದ್ದಾಗ ಬಿಎಂಡಬ್ಲ್ಯೂ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕ ರಾಜೇಶ್ ಶಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಬೈನ ವೊರ್ಲಿಯಲ್ಲಿ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ(24) ಕುಡಿದು ವಾಹನ ಚಲಾಯಿಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಮಿಹಿರ್ ಶಾ ಪರಾರಿಯಾಗಿದ್ದು, ಈಗ ಪೊಲೀಸರು ಅವರ ತಂದೆ ರಾಜೇಶ್ ಶಾ ಅವರನ್ನು ವಶಪಡಿಸಿಕೊಂಡಿದ್ದಾರೆ.

ರಾಜೇಶ್ ಶಾ ಅವರನ್ನು ಪಾಲ್ಘರ್ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ರಾಜೇಶ್ ಶಾ ಅವರ ಹೆಸರಿನಲ್ಲಿ ನೋಂದಣಿಯಾಗಿರುವುದರಿಂದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಕಾರು ಚಾಲಕ ರಾಜಋಷಿ ಬಿದಾವತ್ ಎಂಬುವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Vijayaprabha Mobile App free

ಅಪಘಾತ ಮಾಡಿದ ಕಾರನ್ನು ರಾಜೇಶ್ ಶಾ ಮಗ ಮಿಹಿರ್ ಶಾ ಚಲಾಯಿಸುತ್ತಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದೀಗ ಮಿಹಿರ್ ಶಾ ಫೋನ್ ಸ್ವಿಚ್ ಆಫ್ ಮಾಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.