(Tea Powder) ರಾಜ್ಯ ಸರ್ಕಾರದಿಂದ ಟೀ ಪ್ರಿಯರಿಗೆ ಶಾಕಿಂಗ್ ಸುದ್ದಿ ನೀಡಿದೆ. ಹೌದು, ಈಗಾಗಲೇ ಗೋಬಿ ಮಂಚೂರಿ, ಕಬಾಬ್ ಗೆ ಬಳಸುವಂತ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿತ್ತು. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನಲೆಯಲ್ಲಿ, ಟೀ ಪುಡಿಯನ್ನೇ ಬ್ಯಾನ್ ಮಾಡಲಿದೆ ಎಂದು ತಿಳಿದು ಬಂದಿದೆ.
ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಇರುವ ಬಗ್ಗೆ ಪ್ರಾಯೋಗಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬ್ಯಾನ್ ಮಾಡಲಿದೆ ಸರ್ಕಾರ ಎಂದು ತಿಳಿದು ಬಂದಿದೆ.
ಈಗಾಗಲೇ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಟೀ ಪುಡಿಯನ್ನು ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಬರುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.