ಡೆಹ್ರಾಡೂನ್: ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ (68) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅವರು ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ದೃಢಪಡಿಸಿವೆ. ಬೆನ್ನುಮೂಳೆ ಗಾಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾವತ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
2012ರಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದಿದ್ದ ರಾವತ್ ಕೇದಾರನಾಥ ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. 2016ರಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ್ದರು. 2017ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಸೋತಿದ್ದ ರಾವತ್, 2022ರಲ್ಲಿ ಮತ್ತೆ ಬಿಜೆಪಿಯಿಂದಲೇ ಕೇದಾರನಾಥದಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು.