ಸದ್ಯ ಆಹಾರ ನಾಗಾರೀಕ ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು, ಬೆಂಗಳೂರು ಒನ್ ಸೆಂಟರ್ಗಳಿಗೆ ಫಾಲನುಭವಿಗಳು ಆಗಮಿಸುತ್ತಿದ್ದಾರೆ. ಒಂದು ವರ್ಷದ ಬಳಿಕ ರೆಷಾನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಫಲಾನುಭವಿಗಳು ಬೆಂಗಳೂರು ಒನ್ ಸೆಂಟರ್ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್ಸೈಟ್ ಒಪನ್ ಆಗುತ್ತಿದ್ದು, ಅರ್ಜಿ ಮಾತ್ರ ರವಾನೆಯಾಗುತ್ತಿಲ್ಲ. ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ದ ಫಾಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.