ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಿನಾಂಕ 10.07.2024 ರಂದು ಮಾನ್ಯ ಲೋಕಾಯುಕ್ತ ಕಚೇರಿಗೆ, ಮಾನವ ಹಕ್ಕುಗಳ ಆಯೋಗಕ್ಕೆ, ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ದೂರು ಸಲ್ಲಿಸಲಾಗಿದ್ದು ಆಗಿರುವ ವಂಚನೆಗಳಿಗೆ, ಸರ್ಕಾರದ ತಾರತಮ್ಯ ಧೋರಣೆಗಳಿಗೆ, ಚುನಾವಣೆ ಕಚೇರಿಗೆ ತಪ್ಪು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ರೀತಿಯ ಕ್ರಮವನ್ನು ತೆಗೆದುಕೊಳ್ಳುವಂತೆ ಕೊರಳಾಗಿರುತ್ತದೆ.