9ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 12,000 ಸ್ಕಾಲರ್ ಶಿಪ್

(MS 2024) 9 ರಿಂದ ದ್ವಿತೀಯ ಪಿಯುಸಿಯ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ 2024 ನೇ ಸಾಲಿನ ಮುಸ್ಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಈ ಕೆಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?…

(MS 2024) 9 ರಿಂದ ದ್ವಿತೀಯ ಪಿಯುಸಿಯ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ 2024 ನೇ ಸಾಲಿನ ಮುಸ್ಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಈ ಕೆಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ವಾಣಿಜ್ಯ ಚಾಲಕರು (ಎಲ್ಎಂವಿ/ಎಚ್ಎಂವಿ), ಮೆಕ್ಯಾನಿಕ್ಸ್ ಮತ್ತು ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬಲ್ಯೂಎಸ್) ವರ್ಗದ ವ್ಯಕ್ತಿಗಳ ಮಕ್ಕಳಿಗೆ ಹಣಕಾಸಿನ ನೆರವು ಮತ್ತು ಮಾರ್ಗದರ್ಶನ ಬೆಂಬಲವನ್ನು ನೀಡಲು ವಾಲ್ವೊಲೀನ್ ಕಮ್ಮಿನ್ಸ್ನಿಂದ ಸಿಎಸ್ಆರ್ ವತಿಯಿಂದ ಈ ಸ್ಕಾಲರ್ ಶಿಪ್ ನೀಡುತ್ತಿದೆ.

ಅರ್ಜಿ ಸಲ್ಲಿಸಲು ಯಾರು ಅರ್ಹರು?;

Vijayaprabha Mobile App free
  • ವಾಣಿಜ್ಯ ಚಾಲಕರು, ಮೆಕ್ಯಾನಿಕ್ಸ್ ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಸೇರಿದ (ಇಡಬಲ್ಯೂಎಸ್) ವರ್ಗದ ಮಕ್ಕಳಿಗೆ ವಿದ್ಯಾರ್ಥಿವೇತನ ಲಭ್ಯವಿದೆ.
  • ಹಿಂದಿನ ತರಗತಿಯಲ್ಲಿ 60% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಎಲ್ಲಾ ಮೂಲಗಳಿಂದ ಕುಟುಂಬದ ಒಟ್ಟು ಆದಾಯವು ವಾರ್ಷಿಕ ರೂ. 8 ಲಕ್ಷವನ್ನು ಮೀರಬಾರದು.
  • ದಕ್ಷಿಣ, ಪೂರ್ವ ಮತ್ತು ಈಶಾನ್ಯ ರಾಜ್ಯಗಳಾದ (ಅಸ್ಸಾಂ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಬಿಹಾರ, ಪುದುಚೇರಿ, ಛತ್ತೀಸ್ಗಢ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್ , ಕರ್ನಾಟಕ, ಮೇಘಾಲಯ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ) ಇಲ್ಲಿ 9 ರಿಂದ 12 ನೇ ತರಗತಿಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಎಷ್ಟು ಸ್ಕಾಲರ್ ಶಿಪ್ ಲಭ್ಯ:12,000ಅರ್ಜಿ ಸಲ್ಲಿಕೆ ಹೇಗೆ?:
    ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
    www.b4s.in/nwmd/MKSP1

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
    03-09-2024

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.