ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ಹೀಗೆ ಸೇವಿಸುವ ಮೂಲಕ ದೇಹದ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು ಎಂದು ನಿಮಗೆ ತಿಳಿದಿದ್ಯಾ? ಹೌದು, ಕರಿಬೇವು ತೂಕ ಇಳಿಕೆಗೆ ಮಾತ್ರವಲ್ಲ, ಆರೋಗ್ಯಕ್ಕೆ ಸಾಕಷ್ಟು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
ಕರಿಬೇವಿನ ಎಲೆಗಳು ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಇವುಗಳಲ್ಲಿರುವ ನಾರುಗಳು ಆಹಾರ ಜೀರ್ಣಕ್ರಿಯೆಯಾಗಿ ಕೆಲಸ ಮಾಡುತ್ತವೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ತಿಂದರೆ ಕರುಳಿನ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ಮಲಬದ್ಧತೆ ಕಡಿಮೆಯಾಗುತ್ತದೆ. ಅಲ್ಲದೆ ಜೀರ್ಣಕಾರಿ ಅಸ್ವಸ್ಥತೆಗಳನ್ನು ಸರಿಪಡಿಸುತ್ತದೆ ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ದೇಹವು ಉತ್ತಮ ಜೀರ್ಣಕ್ರಿಯೆಯನ್ನು ಹೊಂದಿದ್ದರೆ ಯಾವುದೇ ತೊಂದರೆಗಳು ಉಂಟಾಗುವುದಿಲ್ಲ. ಹೃದಯದ ಆರೋಗ್ಯ: ಕರಿಬೇವಿನ ಎಲೆಗಳು ಹೃದಯರಕ್ತನಾಳದ ಆರೋಗ್ಯಕ್ಕೆ ಉತ್ತಮವಾಗಿವೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಕರಿಬೇವಿನ ಎಲೆಗಳು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೇ, ಇದರ ನಿರ್ವಿಶೀಕರಣ ಗುಣಲಕ್ಷಣಗಳು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.
ಇದು ದೇಹವನ್ನು ಸ್ವಚ್ಛವಾಗಿ ಮತ್ತು ಆರೋಗ್ಯವಾಗಿಡುತ್ತದೆ ತೂಕ ಇಳಿಕೆ: ಕರಿಬೇವಿನ ಎಲೆಗಳು ತೂಕ ಇಳಿಕೆಗೆ ಸಹಾಯಕವಾಗಿದೆ. ಕರಿಬೇವಿನ ಎಲೆಗಳು ದೇಹದಿಂದ ವಿಷ ಮತ್ತು ಅನಗತ್ಯ ಕೊಬ್ಬನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇವು ದೇಹದಲ್ಲಿರುವ ಕೊಬ್ಬನ್ನು ಕರಗಿಸಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ಇವುಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಹಸಿವು ಕಡಿಮೆಯಾಗುತ್ತದೆ. ಇದು ತಿನ್ನುವ ಆಹಾರದ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಮತ್ತು ದೇಹವನ್ನು ಸದೃಢವಾಗಿಡಲು ಸಹಾಯ ಮಾಡುತ್ತದೆ. ಕಣ್ಣಿನ ಆರೋಗ್ಯ: ಕರಿಬೇವಿನ ಎಲೆಯಲ್ಲಿ ವಿಟಮಿನ್ ಎ ಹೇರಳವಾಗಿದೆ. ಇವು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗೆಯೇ ಕರಿಬೇವಿನ ಸೊಪ್ಪನ್ನು ಪ್ರತಿನಿತ್ಯ ಸೇವಿಸಿದರೆ ಇದರಲ್ಲಿರುವ ಬೀಟಾ-ಕ್ಯಾರೋಟಿನ್ ಕಣ್ಣಿನ ಪೊರೆ ಮತ್ತು ದೃಷ್ಟಿ ಸಮಸ್ಯೆಯಂತಹ ಸಮಸ್ಯೆಗಳನ್ನು ತಡೆಯುತ್ತದೆ.
ಕರಿಬೇವಿನ ಎಲೆಗಳು ಒಟ್ಟಾರೆ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೂದಲು ಮತ್ತು ಚರ್ಮದ ಆರೋಗ್ಯ: ಕರಿಬೇವಿನ ಎಲೆಗಳು ಕೂದಲು ಮತ್ತು ಚರ್ಮಕ್ಕೆ ಉತ್ತಮವಾಗಿವೆ. ಇವುಗಳಲ್ಲಿರುವ ಆಂಟಿಆಕ್ಸಿಡೆಂಟ್ಗಳು ಸ್ವತಂತ್ರ ರಾಡಿಕಲ್ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕರಿಬೇವಿನ ಎಲೆಗಳು ವಿಟಮಿನ್ ಬಿ ಮತ್ತು ಸಿ ಯಂತಹ ಅಗತ್ಯ ಪೋಷಕಾಂಶಗಳಿಂದ ಕೂಡಿವೆ. ನಿತ್ಯವೂ ಕರಿಬೇವಿನ ಎಲೆಗಳನ್ನು ಸೇವಿಸುವುದರಿಂದ ಕೂದಲು ಕಪ್ಪಾಗುತ್ತದೆ ಮತ್ತು ಕೂದಲಿನ ಬೆಳವಣಿಗೆ ಹೆಚ್ಚುತ್ತದೆ. ಅಲ್ಲದೆ, ಇದು ಮೊಡವೆ ಮತ್ತು ಕಲೆಗಳಂತಹ ಚರ್ಮದ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ. ಕರಿಬೇವಿನ ಎಲೆಗಳನ್ನು ತಿನ್ನುವುದು ಹೇಗೆ?: ಕರಿಬೇವಿನ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ಅಗಿಯಬಹುದು. ಇಲ್ಲದಿದ್ದಲ್ಲಿ ರುಬ್ಬಿ ಪೇಸ್ಟ್ ಮಾಡಿ ನೀರಿನಲ್ಲಿ ಬೆರೆಸಿ ಕುಡಿಯಿರಿ. ಹಾಗೆಯೇ ನೀರಿನಲ್ಲಿ ಕುದಿಸಿ ಫಿಲ್ಟರ್ ಮಾಡಿ ಕುಡಿಯಿರಿ. ಇದನ್ನು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ದೇಹಕ್ಕೆ ಲೆಕ್ಕವಿಲ್ಲದಷ್ಟು ಲಾಭಗಳು ಸಿಗುತ್ತವೆ