ಆಗಸ್ಟ್ 1 ರಿಂದ ಏಳನೇ ವೇತನ ಆಯೋಗ ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು…

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರು ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ. ಸಚಿವ ಸಂಪುಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಮಾರ್ಚ್‌ 16 ರಂದು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಸ್ವೀಕಾರ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಜಾರಿ ಬಗ್ಗೆ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದ‌ರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.