ಬೇಳೆಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೂಚನೆ

ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ(Rate) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಭಾರಿ ಮಳೆಯ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಿಂದ ಹಣದುಬ್ಬರ ಉಂಟಾಗಿದೆ. ತರಕಾರಿ ಮಾತ್ರವಲ್ಲದೆ ಬೇಳೆ-ಕಾಳುಗಳ ದರವೂ ಏರಿದೆ. ಇದೀಗ ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ…

ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ(Rate) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಭಾರಿ ಮಳೆಯ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಿಂದ ಹಣದುಬ್ಬರ ಉಂಟಾಗಿದೆ. ತರಕಾರಿ ಮಾತ್ರವಲ್ಲದೆ ಬೇಳೆ-ಕಾಳುಗಳ ದರವೂ ಏರಿದೆ. ಇದೀಗ ಬೇಳೆ-ಕಾಳು ಬೆಲೆ ಇಳಿಸುವಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸೂಚಿಸಿದ್ದಾರೆ. ನವದೆಹಲಿಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ  ಉನ್ನತ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಚಿವರು ಈ ಬಗ್ಗೆ ತ್ವರಿತ ಕ್ರಮಕ್ಕೆ ಸಲಹೆ ನೀಡಿದ್ದಾರೆ.

ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ತೊಗರಿ, ಕಡಲೆ (Chana Dal), ಉದ್ದು (Urad Dal) ಮತ್ತಿತರ ಬೇಳೆಗಳ ಬೆಲೆಯಲ್ಲಿ ಶೇ.4ರಷ್ಟು ಕುಸಿತ ಕಂಡಿದೆ. ಹಾಗಿದ್ದರೂ ವ್ಯಾಪಾರಿಗಳು ದರ ಇಳಿಸದಿರುವುದು ಗಮನಕ್ಕೆ ಬಂದಿದೆ. ಎಲ್ಲ ವರ್ತಕರು ಬೇಳೆ – ಕಾಳು ಬೆಲೆ ಕಡಿಮೆ ಮಾಡುವಂತೆ ಕ್ರಮ ಕೈಗೊಳ್ಳಿ ಎಂದು ಸಚಿವರು ಸೂಚಿಸಿದರು. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಧಾನ್ಯಗಳು ಲಭಿಸುವಂತೆ ಮಾಡಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದೂ ಸಚಿವರು ಹೇಳಿದರು.

ಸಣ್ಣ-ಸಣ್ಣ ವ್ಯಾಪಾರದ ಮಳಿಗೆಗಳಲ್ಲಿ ಮಾತ್ರ ತೊಗರಿ, ಉದ್ದು, ಕಡಲೆ ಬೇಳೆ ಬೆಲೆ ಇಳಿಸಲಾಗಿದೆ. ಆದರೆ, ದೊಡ್ಡ ದೊಡ್ಡ ವ್ಯಾಪಾರಿ ಮಳಿಗೆಗಳಲ್ಲಿ ಬೆಲೆ ಇಳಿಸದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಬೇಳೆಗಳ ಬೆಲೆಯನ್ನು ಕೂಡಲೇ ಇಳಿಸುವಂತೆ ಈ ದೊಡ್ಡ ವರ್ತಕರಿಗೂ ಸೂಚನೆ ನೀಡಲಾಗಿದೆ. ಈ ನಿರ್ದೇಶನ ಅನುಸರಿಸಲು ವಿಫಲವಾದರೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.