ಶ್ರೀನಗರ: ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧನಿಗೆ ತೀವ್ರ ಗಾಯವಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಉಗ್ರರು ದಾಳಿ ನಡೆಸಿದ್ದು, ಉಗ್ರರು ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ.
ಘಟನೆಯ ನಂತರ ಭದ್ರತಾ ಸಿಬ್ಬಂದಿ ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.