ಮನೆ ಊಟ ಪಡೆಯಲು ಅನುಮತಿ ನೀಡುವಂತೆ ಹೈ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಸೇರಿ 17 ಮಂದಿಯನ್ನು ಬಂಧಿಸಲಾಗಿದೆ. ಜೈಲಿನಲ್ಲಿರುವ ದರ್ಶನ್ ಗೆ ಜೈಲೂಟ ಸೇರುತ್ತಿಲ್ಲ, ಇದರಿಂದ ಆರೋಗ್ಯದ ಸಮಸ್ಯೆ ಉಂಟಾಗಿದೆ ಎಂದು ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ದರ್ಶನ್ ಅವರಿಗೆ…

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಸೇರಿ 17 ಮಂದಿಯನ್ನು ಬಂಧಿಸಲಾಗಿದೆ. ಜೈಲಿನಲ್ಲಿರುವ ದರ್ಶನ್ ಗೆ ಜೈಲೂಟ ಸೇರುತ್ತಿಲ್ಲ, ಇದರಿಂದ ಆರೋಗ್ಯದ ಸಮಸ್ಯೆ ಉಂಟಾಗಿದೆ ಎಂದು ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ದರ್ಶನ್ ಅವರಿಗೆ ಮನೆ ಊಟ, ಬಟ್ಟೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ರಿಜೆಕ್ಟ್ ಮಾಡಿತ್ತು. ಈಗ ಮನೆ ಊಟ, ಬಟ್ಟೆ, ಹಾಸಿಗೆಗಾಗಿ ಮತ್ತೆ ಹೈಕೋರ್ಟ್​ಗೆ ನಟ ದರ್ಶನ್ ಮೇಲ್ಮನವಿ ಸಲ್ಲಿಸಿದ್ದಾರೆ. ದರ್ಶನ್ ಮನೆಯಿಂದ ಬಟ್ಟೆ, ಹಾಸಿಗೆ, ಊಟ ಪಡೆಯಲು ಅನುಮತಿ ನೀಡುವಂತೆ ದರ್ಶನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇದನ್ನು ಕೋರ್ಟ್ ನಿರಾಕರಿಸಿತ್ತು. ಇದೀಗ ದರ್ಶನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಎದುರು ದರ್ಶನ್ ಅವರ ಪರ ವಕೀಲರು ಯಾವ ರೀತಿಯ ವಾದ ಮಂಡಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ದರ್ಶನ್​ಗೆ ಮನೆ ಊಟ ಹಾಗೂ ಹಾಸಿಗೆ ನೀಡಬೇಕು ಎಂದು ದರ್ಶನ್ ಪರ ವಕೀಲರು ಈ ಮೊದಲು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ತಾಂತ್ರಿಕ ಕಾರಣ ನೀಡಿ ದರ್ಶನ್ ಪರ ವಕೀಲರು ಹಿಂಪಡೆದಿದ್ದರು. ಪ್ರಕರಣದ ಕುರಿತಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಬೇಕಿದೆ. ಈ ಹಿನ್ನೆಲೆಯಲ್ಲಿ ಹಳೆಯ ಅರ್ಜಿಯನ್ನು ವಾಪಸ್ ಪಡೆದು ಕೊಳ್ಳಲಾಗಿತ್ತು. ಈಗ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.