ವಾಹನ ಸವಾರರ ಗಮನಕ್ಕೆ : ರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿವೆ ಈ ಹೊಸ ನಿಯಮಗಳು!

ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ…

ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿ, ಈ ಕುರಿತು ಸದರಿ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ. (ಪುತಿ ಲಗತ್ತಿಸಿದೆ).

ಇದೇ ರೀತಿ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ (Wrong side driving), ಪುಟ್ ಪಾತ್ ಮೇಲೆ ವಾಹನ ಚಾಲನೆ (Driving on Foot path) ಬಗ್ಗೆ ವಿಶೇಷ ಕಾರ್ಯಾಚರಣೆ ಮಾಡುವುದು, ಇದರ ಜೊತೆಗೆ Defective Number Plate ಮೇಲೆ ಸಹ 01 ನೇ ಆಗಸ್ಟ್ 2024 ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.

Vijayaprabha Mobile App free

ರಾಷ್ಟ್ರೀಯ ಹೆದ್ದಾರಿ (National Highway) ಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನ ಮಾಡುವುದು ಜೀವನಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ (Wrong side driving) ವಾಹನ ಚಾಲನೆ ಮಾಡುವವರ ಮೇಲೆ ಬಿಎನ್‌ಎಸ್ 281 ಅಡಿಯಲ್ಲಿ ಮತ್ತು 184 IMV ಕಾಯ್ದೆಯಡಿ ಹಾಗೂ FIR ದಾಖಲು ಮಾಡಲು ಕ್ರಮ ಜರುಗಿಸುವುದು

ಆದ್ದರಿಂದ, ಬೆಂಗಳೂರು ನಗರ ಸೇರಿದಂತೆ ನಗರ ಪ್ರದೇಶಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ಪುಟ್ ಪಾತ್ ಮೇಲೆ ಮೋಟಾರು ಸೈಕಲ್‌ಗಳ ಚಾಲನೆ ಮಾಡುವುದು ಬಹಳ ಸಾಮಾನ್ಯವಾಗಿರುತ್ತದೆ. ಅದಕ್ಕಾಗಿ ಮೇಲೆ ಉಲ್ಲೇಖಿಸಿದ ವಿಷಯದ ಕುರಿತು ವಿಶೇಷ ಕಾರ್ಯಾಚರಣೆ ಮಾಡುವುದು ಹಾಗೂ ಇದರ ಬಗ್ಗೆ ಜನರಲ್ಲಿ ಮುಂಚಿತವಾಗಿ ಸಾಮಾಜಿಕ ಜಾಲತಾಣ, ಕರಪತ್ರ ಹಾಗೂ ದ್ವನಿ ವರ್ದಕ ಉಪಕರಣಗಳ ಮೂಲಕ ತಿಳುವಳಿಕೆ ನೀಡುವ ಬಗ್ಗೆ ಕ್ರಮ ವಹಿಸುವುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.