ಕಾಪಿರೈಟ್ ಉಲ್ಲಂಘನೆ ಆರೋಪ: ಇಂದು ಪೊಲೀಸ್ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿಚಾರಣೆ

ಬೆಂಗಳೂರು: ‘ಬ್ಯಾಚುಲರ್ ಪಾರ್ಟಿ’ (Bachelor Party) ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ನಟ ರಕ್ಷಿತ್ ಶೆಟ್ಟಿ (Rakshit Shetty) ಇಂದು (ಆ.2) ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಸಿ, ಕೋರ್ಟ್‌ನಲ್ಲಿ…

ಬೆಂಗಳೂರು: ‘ಬ್ಯಾಚುಲರ್ ಪಾರ್ಟಿ’ (Bachelor Party) ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ನಟ ರಕ್ಷಿತ್ ಶೆಟ್ಟಿ (Rakshit Shetty) ಇಂದು (ಆ.2) ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಸಿ, ಕೋರ್ಟ್‌ನಲ್ಲಿ ಫೈಟ್ ಮಾಡ್ತೀನಿ, ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದು ಮಾತನಾಡಿದ್ದಾರೆ. ರಕ್ಷಿತ್ ಶೆಟ್ಟಿ ಮಾತನಾಡಿ, ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ. ನನ್ನ ಪ್ರಕಾರ, ಕಾಪಿರೈಟ್ ಉಲ್ಲಂಘನೆ ಅಲ್ಲ. ಈ ಸಿನಿಮಾಗೂ ಮುನ್ನ ಆ ಹಾಡುಗಳನ್ನು ಬಳಸಲು ಅನುಮತಿಗಾಗಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಅವರ ಬಳಿ ಮಾತನಾಡಿದಾಗ, ಹೆಚ್ಚಿನ ಮೊತ್ತ ಕೇಳಿದ್ದರು. ಅಷ್ಟು ದೊಡ್ಡ ಅಮೌಂಟ್ ಕೊಡೋಕೆ ನಮಗೆ ಸರಿ ಎನಿಸಲಿಲ್ಲ. ಆಮೇಲೆ ಅವರು ಹೇಳ್ತೀವಿ ಅಂತ ಆ ಮಾತುಕತೆ ಅಲ್ಲೇ ನಿಂತು ಹೋಯಿತು. ಈ ಸಿನಿಮಾದ ರಿಲೀಸ್ ನಂತರ ಅವರು ಕೇಸ್ ಹಾಕಿದ್ದಾರೆ ಎಂದಿದ್ದಾರೆ.

ಮೊದಲಿಗೆ ಇದು ಕಾಪಿರೈಟ್ ಉಲ್ಲಂಘನೆ ಅಲ್ಲ. ಕನ್ನಡದ ಹಾಡನ್ನು ಕನ್ನಡ ಚಿತ್ರದಲ್ಲಿ ಬಳಕೆ ಮಾಡುವಂತೆಯೇ ಇಲ್ವಾ ಎಂದು ನಟ ಪ್ರಶ್ನಿಸಿದ್ದಾರೆ. ಕೊಟ್ಟಿರುವ ಕಂಪ್ಲೆಂಟ್‌ಗೆ ನಾನು ಕೂಡ ಕೋರ್ಟ್‌ನಲ್ಲಿ ಫೈಟ್ ಮಾಡ್ತೀನಿ ಎಂದಿದ್ದಾರೆ. ಸಾಂಧರ್ಬಿಕವಾಗಿ ಹಾಡು ಬಳಕೆಯಾಗಿದೆ ಅಷ್ಟೆ. ಕಾಪಿರೈಟ್ ಆಕ್ಟ್ ಏನು ಹೇಳುತ್ತೆ ಎಂಬುದನ್ನು ಕೋರ್ಟ್‌ನಲ್ಲಿ ನೋಡೋಣ. ನ್ಯಾಯಾಲಯ ತೀರ್ಮಾನ ಮಾಡಲಿ. ಈ ಬಗ್ಗೆ ನಮಗೂ ಅರ್ಥವಾಗಲಿ ಯಾವುದೂ ಬಳಸಬೇಕು ಯಾವುದು ಬಳಸಬಾರದು ಅಂತ. ನಮ್ಮ ಪ್ರಕಾರ, ಇದು ಸರಿ ಅಂತಾ ವಾದ ಮಾಡ್ತೀನಿ ಎಂದು ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ. ಇನ್ನೂ ಈ ಹಿಂದೆ ‘ಕಿರಿಕ್ ಪಾರ್ಟಿ’ ಸಿನಿಮಾ ವಿಚಾರದಲ್ಲೂ ಕಾಪಿರೈಟ್ ಆರೋಪ ಬಂದಾಗ, ನಮ್ಮ ಕಡೆ ಸರಿಯಿದೆ ಅಂತ ಕೋರ್ಟ್‌ನಿಂದ ತೀರ್ಪು ಬಂದಿತ್ತು. ಆ ಬಳಿಕ ಹೊರಗೆ ಸಂಧಾನ ಮಾತುಕತೆಯಾಗಿತ್ತು ಎಂದು ರಕ್ಷಿತ್ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.