ಮದುವೆಗೆ ಪೋಷಕರ ವಿರೋಧ : ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು!

ಬಾಗಲಕೋಟೆ : ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ…

ಬಾಗಲಕೋಟೆ : ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.

ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತರು.

Vijayaprabha Mobile App free

ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಆದ್ರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್‌ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.