ವಿದ್ಯಾರ್ಥಿಗಳಿಗೆ ಸಿಗಲಿದೆ 2024-25ನೇ ಸಾಲಿನ ನ್ಯಾಷನಲ್ ಇ-ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಿ

(Scholarship nsp) ವಿಕಲಚೇತನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ…

(Scholarship nsp) ವಿಕಲಚೇತನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

2024-25ನೇ ಸಾಲಿಗೆ ನ್ಯಾಷನಲ್ ಇ-ಸ್ಕಾಲರ್ ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರೀ-ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿಗಳನ್ನು ಆಗಸ್ಟ್ 31 ರೊಳಗೆ ಹಾಗೂ ಪೋಸ್ಟ್ -ಮೆಟ್ರಿಕ್ ವಿದ್ಯಾರ್ಥಿಗಳು ಅಕ್ಟೋಬರ್ 31 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Vijayaprabha Mobile App free

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಗಳನ್ನು ನ್ಯಾಷನಲ್ ಇ-ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. (http://scholarships.gov.in)

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಣಿ ಸಂಖ್ಯೆ 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.